ವಾಯುನೆಲೆ ಕೈಗಾರಿಕೆಗಳ ಮೇಲೆ ಉಗ್ರರು ನಡೆಸಿದ ದಾಳಿಗೆ ಪ್ರತೀಕಾರವಾಗಿ ಇರಾಕ್ ಮತ್ತು ಸಿರಿಯಾದಲ್ಲಿನ ಸುಮಾರು 30 ಉಗ್ರರ ನೆಲೆಗಳ ಮೇಲೆ ಟರ್ಕಿ ವಾಯುದಾಳಿ ನಡೆಸಿದೆ.
ಟರ್ಕಿಯ ವಿಮಾನ ತಯಾರಿಕಾ ಕೈಗಾರಿಕ ಪ್ರದೇಶದ ಮೇಲೆ ಉಗ್ರರು ದಾಳಿ ನಡೆಸಿದ್ದರು. ಇದಕ್ಕೆ ಪ್ರತಿಕಾರವಾಗಿ ದಾಳಿ ನಡೆಸಲಾಗಿದ್ದು, ಯಾವುದೇ ನಾಗರಿಕರಿಗೆ ತೊಂದರೆ ಆಗದಂತೆ ಎಚ್ಚರಿಕೆ ವಹಿಸಲಾಗಿತ್ತು ಎಂದು ಟರ್ಕಿಯ ಸೇನಾ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.
ಉತ್ತರ ಇರಾಕ್ ಮತ್ತು ಸಿರಿಯಾದಲ್ಲಿ ನೆಲೆಸಿರುವ ಕುರ್ದಿಸ್ತಾನ್ ವರ್ಕರ್ಸ್ ಪಾರ್ಟಿ (ಪಿಕೆಕೆ) ನೆಲೆಗಳ ಮೇಲೆ ದಾಳಿ ಮಾಡಲಾಗಿದ್ದು, ಪಿಕೆಕೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.