Thursday, 12 November 2026 — Kannadavahini
BREAKING NEWS
ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು
ರಾಜ್ಯ

ಮಾಡೆಲ್ ಹೌಸ್ ಗೆ ಬೆಂಕಿ ಪ್ರಕರಣಕ್ಕೆ ಟ್ವಿಸ್ಟ್: ಸೆಲ್ಫಿ ವೇಳೆ ಎಡವಟ್ಟಿನಿಂದ ಅನಾಹುತ!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 27 ವೀಕ್ಷಣೆಗಳು
ballary model house

ಶಾಸಕ ಜನಾರ್ದನ ರೆಡ್ಡಿಗೆ ಸೇರಿದ ಬಳ್ಳಾರಿಯಲ್ಲಿರುವ ಮಾಡೆಲ್ ಹೌಸ್ ಗೆ ಬೆಂಕಿ ಹಾಕಿದ ಪ್ರಕರಣದಲ್ಲಿ ಬಾಲಕ ಸೇರಿದಂತೆ 8 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತರಿಗೆ ಯಾವುದೇ ರಾಜಕೀಯ ನಂಟು ಇಲ್ಲ ಎಂಬುದು ತಿಳಿದು ಬಂದಿದೆ.

ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಸೈಟ್ ಎಂಜಿನಿಯರ್ ರಿಜ್ವಾನ್ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಬಳ್ಳಾರಿ ಗ್ರಾಮೀಣ ಠಾಣಾ ಪೊಲೀಸರು ಸಿಸಿಟಿವಿ, ಫೋಟೊಗಳನ್ನು ಆಧರಿಸಿ 8 ರಿಂದ 10 ಜನರನ್ನು ಪತ್ತೆ ಹಚ್ಚಿದ್ದಾರೆ. ಅಗ್ನಿ ಅನಾಹುತದಲ್ಲಿ ಮನೆಯಲ್ಲಿದ್ದ 1 ಕೋಟಿ 25 ಲಕ್ಷ ಮೌಲ್ಯದ ಪರಿಕರಗಳು ನಷ್ಟವಾಗಿವೆ.

‘ಅಗ್ನಿ ಅವಘಡದ ಪ್ರಕರಣದಲ್ಲಿ 8 ಮಂದಿಯನ್ನು ವಶಕ್ಕೆ ಪಡೆದಿದ್ದು, ಇದರಲ್ಲಿ ಕೆಲವರು ಅಪ್ರಾಪ್ತರಿದ್ದಾರೆ ಎಂದು ಶನಿವಾರ ಬಳ್ಳಾರಿ ವಲಯ ಐಜಿಪಿ ಡಾ. ಪಿ.ಎಸ್‌ ಹರ್ಷ ತಿಳಿಸಿದ್ದಾರೆ.

ಬಂಧಿತರ ವಯಸ್ಸಿಗೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲಿಸುತ್ತಿದ್ದೇವೆ. ಬಂಧಿತರಿಗೆ ಯಾವುದೇ ರಾಜಕೀಯ ನಂಟು ಇಲ್ಲ. ಈ ಮನೆಯ ಪರಿಚಯ ಹೊಂದಿದ್ದು, ಸಿಗರೇಟ್ ಹಚ್ಚಿಕೊಳ್ಳುವಾಗ ಆಕಸ್ಮಿಕವಾಗಿ ಅಂಟಿದ ಬೆಂಕಿಯಿಂದ ಅನಾಹುತ ಸಂಭವಿಸಿದೆ ಎಂದು ಅವರು ವಿವರಿಸಿದರು.

ಘಟನೆ ಸಂಬಂಧ 8 ಜನರನ್ನು ವಶಕ್ಕೆ ಪಡೆದಿದ್ದೇವೆ. ಅವರಲ್ಲಿ 6 ಮಂದಿ ಅಪ್ರಾಪ್ತರು ಹಾಗೂ ಇಬ್ಬರು ವಯಸ್ಕರಿದ್ದಾರೆ. ಮನೆಯೊಳಗೆ ಆರೋಪಿಗಳು ರಿಲ್ಸ್, ಪೋಟೋ ಶೂಟ್‌ ಮಾಡಿಕೊಂಡಿದ್ದಾರೆ. ಬಂಧಿತರ ಮೊಬೈಲ್ ಪರಿಶೀಲಿಸಿದಾಗ ಪೋಟೋ‌ ಶೂಟ್‌ಗಾಗಿ ಮಾಡೆಲ್ ಹೌಸ್​ನ ಮೊದಲ ಮಹಡಿಗೆ ಹೋಗಿದ್ದಾರೆ. ಸಿಗರೇಟ್ ವಿಚಾರವಾಗಿ ಬೆಂಕಿ ತಾಗಿರುವ ಶಂಕೆ ಇದೆ ಎಂದು ಅವರು ಹೇಳಿದರು.

ಆರೋಪಿತರಲ್ಲಿ ಇಬ್ಬರು ಮುಂಬೈಯಿಂದ ಬಂದವರು. ಯಾರಿಗೂ ರಾಜಕೀಯ ಹಿನ್ನೆಲೆ ಇಲ್ಲ. ಹೆಚ್ಚಿನ ಪರಿಶೀಲನೆ ಮಾಡಲಾಗುವುದು. ಇದು ದುರುದ್ದೇಶದಿಂದ ಮಾಡಿದ ಕೃತ್ಯ ಅಲ್ಲ. ಬದಲಿಗೆ ಆಕಸ್ಮಿಕವಾಗಿ ನಡೆದ ಘಟನೆ ಎಂದು ಮೇಲ್ಮೋಟಕ್ಕೆ ಕಂಡು ಬರುತ್ತಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್​ ಪನ್ನೇಕರ್ ಮಾಹಿತಿ ನೀಡಿದ್ದಾರೆ.

ಶುಕ್ರವಾರ ರಾತ್ರಿ, ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಪ್ರತಿಕ್ರಿಯಿಸಿದ್ದ ಮಾಜಿ ಶಾಸಕ ಸೋಮಶೇಖರ್ ರೆಡ್ಡಿ, ನಮ್ಮ ತಾಯಿಯ ಹೆಸರಲ್ಲಿ ಲೇಔಟ್ ಮಾಡಿದ್ದೆವು. ಇಲ್ಲಿ ಜನರಿಗೆ ತೋರಿಸುವುದಕ್ಕಾಗಿ ಮಾಡೆಲ್ ಹೌಸ್ ಕಟ್ಟಿಸಿದ್ದೆವು. ಈ ಮನೆಗೆ 15 ದಿನಗಳ ಹಿಂದೆ ಬ್ಯಾನರ್ ವಿಷಯದಲ್ಲಿ ನಡೆದ ಗಲಾಟೆ ವೇಳೆ ಇದ್ದ ವ್ಯಕ್ತಿಗಳು ಡಿಸೇಲ್, ಪೆಟ್ರೋಲ್ ಹಾಕಿ 10-15 ಜನರು ಬೆಂಕಿ ಹಚ್ಚಿದ್ದಾರೆ. ಪರಿಣಾಮ ಮನೆಯಲ್ಲಿನ ಎಲ್ಲ ಪಿಠೋಪಕರಣಗಳು ಸುಟ್ಟು ಹೋಗಿವೆ. ಎಲ್ಲ ಗ್ಲಾಸ್​ ಪುಡಿಪುಡಿಯಾಗಿವೆ. ಅಗ್ನಿಶಾಮಕ ದಳ ಮತ್ತು ಪೊಲೀಸರು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ’ ಎಂದು ಆರೋಪಿಸಿದ್ದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8409 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment