Monday, June 8, 2026
Google search engine
Homeಅಪರಾಧತ್ರಿವಳಿ ಕೊಲೆ ಪ್ರಕರಣಕ್ಕೆ ಟ್ವಿಸ್ಟ್: ತಂಗಿ ಗರ್ಭಿಣಿ ಅಂತ ಪೊಲೀಸರ ಮುಂದೆ ಕತೆ ಕಟ್ಟಿದ ಕೊಲೆಗಡುಕ!

ತ್ರಿವಳಿ ಕೊಲೆ ಪ್ರಕರಣಕ್ಕೆ ಟ್ವಿಸ್ಟ್: ತಂಗಿ ಗರ್ಭಿಣಿ ಅಂತ ಪೊಲೀಸರ ಮುಂದೆ ಕತೆ ಕಟ್ಟಿದ ಕೊಲೆಗಡುಕ!

ವಿಜಯನಗರ ಜಿಲ್ಲೆಯ ಕೊಟ್ಟೂರಿನಲ್ಲಿ ನಡೆದ ಭೀಕರ ತ್ರಿವಳಿ ಕೊಲೆ ಪ್ರಕರಣದ ಆರೋಪಿ ಪಾಪಿ ಮಗ ತಂಗಿ ಮದುವೆ ಆಗುವ ಮುನ್ನವೇ ಗರ್ಭಿಣಿ ಆಗಿದ್ದಕ್ಕೆ ಕೊಲೆ ಮಾಡಿದ್ದಾಗಿ ಪೊಲೀಸರ ಮುಂದೆಯೇ ಸುಳ್ಳು ಹೇಳಿ ಸಿಕ್ಕಿಬಿದ್ದಿದ್ದಾನೆ.

ತಂದೆ-ತಾಯಿ ಹಾಗೂ ತಂಗಿಯನ್ನು ಒಬ್ಬರಿಗೆ ಗೊತ್ತಿಲ್ಲದೇ ಮತ್ತೊಬ್ಬರನ್ನು ಕೊಂದ ಮಗ ಅಕ್ಷಯ್ ನನ್ನು ಕೊಟ್ಟೂರು ಪೊಲೀಸರು ವಿಚಾರಣೆ ನಡೆಸುತ್ತಿದ್ದು, ಪೊಲೀಸರನ್ನೇ ಯಾಮಾರಿಸಲು ಪ್ರಯತ್ನಿಸಿದ್ದಾನೆ.

ಮದುವೆ ಆಗುವ ಮುನ್ನವೇ ಅನ್ಯ ಜಾತಿಯ ಯುವಕನ್ನು ಪ್ರೀತಿಸಿದ್ದ ತಂಗಿ ಮೂರು ತಿಂಗಳ ಗರ್ಭಿಣಿ ಆಗಿದ್ದಳು. ತಂಗಿಗೆ ಬೆಂಬಲ ನೀಡಿದ ತಂದೆ, ತಾಯಿಯನ್ನೂ ಕೊಲೆ ಮಾಡಿದ್ದಾನೆ. ಪೊಲೀಸರ ವಿಚಾರಣೆ ವೇಳೆ ಅಕ್ಷಯ್ ಹೇಳಿದ್ದ. ಕೇವಲ ದ್ವೇಷದ ಕೊಲೆಯಲ್ಲ, ಕುಟುಂಬದ ಗೌರವ ಉಳಿಸಿಕೊಳ್ಳಲು ಮಾಡಿದ ಕೃತ್ಯ ಎಂದು ಹೇಳಿಕೊಂಡಿದ್ದಾನೆ.

ನಾಲ್ಕು ತಿಂಗಳ ಹಿಂದೆ ಅಕ್ಷಯ್ ತಂಗಿಯ ಮೊಬೈಲ್ ಪರಿಶೀಲಿಸಿದ ವೇಳೆ ಪಿಯುಸಿ ಓದುತ್ತಿದ್ದ ಯುವಕನೊಂದಿಗೆ ಅವಳು ನಿರಂತರ ಸಂಪರ್ಕದಲ್ಲಿರುವುದು ಗೊತ್ತಾಗಿದೆ. ಬಳಿಕ ಆ ಯುವಕನಿಗೆ ಕರೆ ಮಾಡಿದ ಅಕ್ಷಯ್, ಇಬ್ಬರ ನಡುವೆ ಪ್ರೇಮ ಸಂಬಂಧ ಇರುವುದನ್ನು ತಿಳಿದುಕೊಂಡಿದ್ದ. ಇದರಿಂದ ಕೋಪಗೊಂಡ ಅಕ್ಷಯ್ ತಂಗಿಗೆ ಹಲ್ಲೆ ಮಾಡಿ ಬೆದರಿಸಿದ್ದಾನೆ. ಬಳಿಕ ಅಮೃತ ‘ನಾನು ಪ್ರೀತಿ ಮಾಡುವುದಿಲ್ಲ ಎಂದು ಕ್ಷಮೆ ಕೇಳಿದ್ದರೂ, ಜನವರಿ 26ರಂದು ಅವಳು ಗರ್ಭಿಣಿಯಾಗಿದ್ದಾಳೆ ಎಂದು ಹೇಳಿದ್ದಾನೆ.

ಈ ವಿಷಯವನ್ನು ತಾಯಿ ಅಕ್ಷಯ್‌ಗೆ ತಿಳಿಸಿದ್ದರಿಂದ ಆತ ಇನ್ನಷ್ಟು ಕೋಪಗೊಂಡಿದ್ದಾನೆ. ಗರ್ಭಪಾತ ಮಾಡಿಸೋಣ ಎಂದು ಅಕ್ಷಯ್ ಹೇಳಿದ್ದರೂ, ತಂದೆ-ತಾಯಿ ಅದಕ್ಕೆ ಒಪ್ಪಿರಲಿಲ್ಲ. ಇದರಿಂದ ತನ್ನ ಮಾತಿಗೆ ಬೆಲೆ ಇಲ್ಲವೆಂದು ಭಾವಿಸಿದ ಅಕ್ಷಯ್, ತಂಗಿಯನ್ನು ಕೊಲ್ಲುವ ನಿರ್ಧಾರಕ್ಕೆ ಬಂದಿದ್ದಾನೆ.

ಆದರೆ ಅಕ್ಷಯ್ ಬೆಟ್ಟಿಂಗ್ ಮತ್ತು ಗ್ಯಾಬ್ಲಿಂಗ್ ಚಟಕ್ಕೆ ಬಿದ್ದಿದ್ದು, ಇದರಿಂದ ನಷ್ಟಕ್ಕೆ ಒಳಗಾಗಿದ್ದ, ಮನೆಯವರ ಜೊತೆ ಹಣಕಾಸಿನ ವಿಷಯಕ್ಕೆ ಉಂಟಾದ ಜಗಳದಿಂದ ಸೇಡು ತೀರಿಸಿಕೊಳ್ಳಲು ಮನೆಯರನ್ನೇ ಕೊಂದಿದ್ದಾನೆ ಎಂಬುದು ವಿಚಾರಣೆ ವೇಳೆ ಪೊಲೀಸರು ಪತ್ತೆ ಹಚ್ಚಿದ್ದು, ವಿಚಾರಣೆ ವೇಳೆ ಸುಳ್ಳು ಹೇಳಿದ್ದನ್ನು ಪತ್ತೆ ಹಚ್ಚಿದ್ದಾರೆ.

ಒಂದೊಂದಾಗಿ ನಡೆಯಿತು ಭೀಕರ ಹತ್ಯೆ

ಜನವರಿ 26ರಂದು ಮೊದಲು ಅಕ್ಷಯ್ ತನ್ನ ತಾಯಿಯನ್ನು ಕೊಂದಿದ್ದಾನೆ. ಕೊಲೆ ಬಳಿಕ ಸ್ನಾನ ಮಾಡಿ ರಕ್ತಸಿಕ್ತ ಬಟ್ಟೆಗಳನ್ನು ನಾಶಪಡಿಸಿದ್ದಾನೆ. ಸಂಜೆ ತಂದೆ ಜೊತೆ ತೆರಳಿದ್ದ ತಂಗಿಗೆ ಉಡುಗೊರೆ ತಂದಿದ್ದಿನಿ ಬಾ ಎಂದು ಪ್ರತ್ಯೇಕವಾಗಿ ಕರೆಸಿಕೊಂಡು ಮನೆಗೆ ಬಂದಾಗ ಆಕೆಯನ್ನೂ ಹತ್ಯೆ ಮಾಡಿ, ತಾಯಿಯ ಮೃತದೇಹದ ಪಕ್ಕದಲ್ಲೇ ಮಲಗಿಸಿದ್ದಾನೆ. ಮತ್ತೆ ಸ್ನಾನ ಮಾಡಿ ಅದೇ ಬಟ್ಟೆ ಧರಿಸಿದ್ದಾನೆ.

ರಾತ್ರಿ 10.30ರ ಸುಮಾರಿಗೆ ಕುಡಿದು ಮನೆಗೆ ಬಂದ ತಂದೆ ಸೋಫಾದ ಮೇಲೆ ಕೂತಿದ್ದಾಗ, ಅಕ್ಷಯ್ ಅವರ ಕುತ್ತಿಗೆ ಕತ್ತರಿಸಿ ಕೊಲೆ ಮಾಡಿದ್ದಾನೆ. ತಂದೆಯ ಮೃತದೇಹವನ್ನೂ ತಾಯಿ ಹಾಗೂ ತಂಗಿಯ ಪಕ್ಕ ಇಟ್ಟಿದ್ದಾನೆ. ನಂತರ ಆ ಕೊಠಡಿಗೆ ಬೀಗ ಹಾಕಿ, ಮತ್ತೆ ಸ್ನಾನ ಮಾಡಿ ಬೇರೆ ಬಟ್ಟೆ ಧರಿಸಿದ್ದಾನೆ.

ಸಾಕ್ಷಿ ನಾಶಕ್ಕೆ ಸಂಚು, ಮಾವನ ಸಹಾಯ

ಮೂರು ಕೊಲೆಗಳ ಬಳಿಕ ರಾತ್ರಿಯಿಡೀ ಟಿವಿ ನೋಡುತ್ತಾ, ತಪ್ಪಿಸಿಕೊಳ್ಳುವ ಮಾರ್ಗಗಳ ಬಗ್ಗೆ ಯೋಚಿಸಿದ್ದಾನೆ. ಬೆಳಗ್ಗೆ ತಾಯಿ ಹಾಗೂ ತಂಗಿಯ ಮೊಬೈಲ್‌ಗಳನ್ನು ತೆಗೆದುಕೊಂಡು ಬೆಂಗಳೂರಿಗೆ ಬಂದ ಅಕ್ಷಯ್ (ಆತನ ಮೊಬೈಲ್ ಮನೆಯಲ್ಲೇ ಬಿಟ್ಟುಬಂದಿದ್ದ), ಜಯದೇವ ಆಸ್ಪತ್ರೆ ಬಳಿ ಫೋಟೋ ತೆಗೆದು ತನ್ನ ಮೊಬೈಲ್​ಗೆ ಕಳುಹಿಸಿದ್ದಾನೆ. ನಂತರ ಆ ಮೊಬೈಲ್‌ಗಳನ್ನು ಆಸ್ಪತ್ರೆ ಸಮೀಪದ ಡಸ್ಟ್‌ಬಿನ್‌ನಲ್ಲಿ ಎಸೆದಿದ್ದಾನೆ.

ಈ ಸಂದರ್ಭದಲ್ಲಿ ಅಕ್ಷಯ್ ತನ್ನ ಮಾವ ವಸಂತನನ್ನು ಭೇಟಿ ಮಾಡಿ ಎಲ್ಲ ವಿಚಾರ ತಿಳಿಸಿದ್ದಾನೆ. ಶವಗಳನ್ನು ಹೂತು ‘ಮಿಸ್ಸಿಂಗ್’ ನಾಟಕ ಆಡೋಣ ಎಂಬ ಐಡಿಯಾ ಮಾವನೇ ಕೊಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಅದರಂತೆ ಜನವರಿ 27ರ ರಾತ್ರಿ ಕೊಟ್ಟೂರಿಗೆ ವಾಪಸ್ ಆಗಿದ್ದ ಅಕ್ಷಯ್, ಟೈಲ್ಸ್ ಕಟರ್ ಹಾಗೂ ಡ್ರಿಲ್ಲಿಂಗ್ ಯಂತ್ರ ತರಿಸಿ, 5×5 ಅಳತೆಯ ಗುಂಡಿ ತೋಡಿ ಮೂವರ ಶವಗಳನ್ನು ಹೂತಿದ್ದಾನೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments