ಯಾದಗಿರಿ: ಬಟ್ಟೆ ತೊಳೆಯುವಾಗ ಕಾಲು ಜಾರಿ ಬಾವಿಗೆ ಬಿದ್ದು ಇಬ್ಬರು ಬಾಲಕಿಯರು ಮೃತಪಟ್ಟಿರುವ ಘಟನೆ ಯಾದಗಿರಿಯ ಮೊಟ್ನಳ್ಳಿ ಗ್ರಾಮದ ಹೊರ ಭಾಗದಲ್ಲಿ ಸಂಭವಿಸಿದೆ.
ಮೃತರನ್ನು ವೈಶಾಲಿ (17), ನವೀತಾ (16) ಎಂದು ಗುರುತಿಸಲಾಗಿದೆ. ಈ ಇಬ್ಬರೂ ಬಟ್ಟೆ ತೊಳೆಯಲು ಬಾವಿ ಬಳಿ ಹೋಗಿದ್ದಾಗ ಈ ಅವಘಡ ಸಂಭವಿಸಿದೆ.
ಸ್ಥಳೀಯರು ಮೃತದೇಹಗಳನ್ನು ಬಾವಿಯಿಂದ ಹೊರಗೆ ತೆಗೆದಿದ್ದಾರೆ. ಗುರುಮಠಕಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.



