Thursday, 12 November 2026 — Kannadavahini
BREAKING NEWS
ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು
ರಾಜ್ಯ

ಮಂಗಳೂರಿನಲ್ಲಿ ಮತ್ತಿಬ್ಬರು ಹಿಂದೂ ಮುಖಂಡರಿಗೆ ಬೆದರಿಕೆ: ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 16 ವೀಕ್ಷಣೆಗಳು
bharth mangaluru

ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಹಾಗೂ ರೌಡಿಶೀಟರ್‌ ಸುಹಾಸ್‌ ಶೆಟ್ಟಿ ಹತ್ಯೆ ಬೆನ್ನಲ್ಲೇ ಕೊಲೆ ಆರೋಪಿಗಳೂ ಆಗಿರುವ ಹಲವು ಹಿಂದೂ ಸಂಘಟನೆಯ ಮುಖಂಡರ ಹತ್ಯೆಗೆ ಬೆದರಿಕೆ ಕರೆಗಳು ಬಂದಿವೆ.

ಮುಂದಿನ ಟಾರ್ಗೆಟ್ ಶರಣ್​ ಪಂಪ್​ವೆಲ್​ ಮತ್ತು ಭರತ್ ಕುಮ್ಡೇಲ್​ ಎಂದು ಸೋಷಿಯಲ್ ಮೀಡಿಯಾದಲ್ಲಿ ಹಾಕಿರುವ ಪೋಸ್ಟ್ ವೈರಲ್ ಮಾಡಲಾಗಿದೆ. ಇದರಿಂದ ಮಂಗಳೂರಿನಲ್ಲಿ ಗ್ಯಾಂಗ್ ವಾರ್ ಮುನ್ಸೂಚನೆ ಹಿನ್ನೆಲೆಯಲ್ಲಿ ಮಂಗಳೂರು ಬೂದಿ ಮುಚ್ಚಿದ ಕೆಂಡಂತೆ ಇದ್ದು, ಪೊಲೀಸರು ಹೈಅಲರ್ಟ್ ಆಗಿದ್ದಾರೆ.

ಎಸ್​​ಡಿಪಿಐ ಮುಖಂಡ ಅಶ್ರಫ್ ಹತ್ಯೆಯ ಪ್ರಮುಖ ಆರೋಪಿ ಆಗಿರುವ ಹಿಂದೂ ಕಾರ್ಯಕರ್ತ ಭರತ್ ಕುಮ್ದೇಲ್ ಅವರನ್ನು ಮೇ 5ರಂದು ರಾತ್ರಿ 9.30ಕ್ಕೆ ನಿನ್ನ ಸ್ಥಳದಲ್ಲೇ ಕೊಲ್ಲುವುದಾಗಿ ಕಿಡಿಗೇಡಿಗಳು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.

ಎಸ್​​ಡಿಪಿಐನಲ್ಲಿ ಮುಂಚೂಣಿಯಲ್ಲಿದ್ದ ಮುಖಂಡ ಅಶ್ರಫ್ ಕಲಾಯಿ ಅನ್ನು 2017ರ ಜೂನ್ 21ರಂದು ಬಂಟ್ವಾಳದ ಬೆಂಜನಪದವು ಎಂಬಲ್ಲಿ ಬರ್ಬರವಾಗಿ ಹತ್ಯೆಗೈದಿದ್ದರು. ಅಶ್ರಫ್ ಕೊಲೆ ಬಳಿಕ ಪ್ರತೀಕಾರವಾಗಿ ಶರತ್ ಮಡಿವಾಳ ಹತ್ಯೆಯಾಗಿತ್ತು. ಅಶ್ರಫ್ ಕೊಂದ ಭರತ್​​ ನನ್ನ ಮರೆತಿಲ್ಲ. Wait and watch ಎಂದು ಕೇವಲ 8 ಗಂಟೆ ಮೊದಲು On fixed leader ಎಂಬ ಹೆಸರಿನ ಇನ್​​ಸ್ಟಾಗ್ರಾಂ ಪೇಜ್​ನಲ್ಲಿ ಮತ್ತೊಂದು ಪೋಸ್ಟ್ ಹಂಚಿಕೊಳ್ಳಲಾಗಿದೆ.

ಭರತ್ ಕುಮ್ಡೇಲ್​ ಮಾತ್ರವಲ್ಲದೇ ವಿಶ್ವ ಹಿಂದೂ ಪರಿಷತ್​ ಮುಖಂಡ ಶರಣ್ ಪಂಪ್​ವೆಲ್​​ಗೂ ಜೀವ ಬೆದರಿಕೆ ಹಾಕಲಾಗಿದೆ. ಮುಂದಿನ ಟಾರ್ಗೆಟ್ ಶರಣ್ ಪಂಪ್​ವೆಲ್, ಶರಣ್ ಹತ್ಯೆಯಾಗಲು ತಯಾರಾಗಿರು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಲಾಗಿದೆ.

ಅದೇ ರೀತಿಯಾಗಿ ಶ್ರೀಜಿತ್ ಅಲಿಯಾಸ್ ಶ್ರೀಜುಗೂ ಜೀವ ಬೆದರಿಕೆ ಹಾಕಲಾಗಿದೆ. ‘Killers_target’ ಎಂಬ ಪೇಜ್​​ನಿಂದ ಮುಂಚೆ ಪೋಸ್ಟ್​ ಹಾಕಲಾಗಿತ್ತು. ಇಂದು ಮತ್ತೆ ವೈಯಕ್ತಿಕವಾಗಿ ‘Abu_Sifiyan678’ ಪೇಜ್​​ನಿಂದ ಮೆಸೇಜ್ ಕಳುಹಿಸಿರುವ ಕಿಡಿಗೇಡಿಗಳು, ‘ಎಲ್ಲಿದೀಯಾ ನೀನು, ನೆಕ್ಸ್ಟ್ ನೀನೆ ಅಂತ ಮಲಯಾಳಂನಲ್ಲಿ ಮೆಸೇಜ್ ಮಾಡಿದ್ದಾರೆ.

ಬಿಜೆಪಿ ಕಾರ್ಯಕರ್ತ ದೀಪಕ್ ರಾವ್ ಹತ್ಯೆ ಪ್ರತಿಕಾರಕ್ಕೆ 2018ರ ಜನವರಿಯಲ್ಲಿ ಬಶೀರ್​ ಕೊಲೆ ಆಗಿತ್ತು. ಮಂಗಳೂರಿನ ಹೊರವಲಯ ಕೊಟ್ಟಾರ ಚೌಕಿ ಬಳಿ ಹತ್ಯೆ ಮಾಡಲಾಗಿತ್ತು. ಕೇರಳದ ಕಾಸರಗೋಡು ಜಿಲ್ಲೆಯ ಉಪ್ಪಳ ನಿವಾಸಿ ಶ್ರೀಜಿತ್ ಅಲಿಯಾಸ್ ಶ್ರೀಜು ಪ್ರಕರಣದ ಆರೋಪಿ. ಹೀಗಾಗಿ ಈತನಿಗೆ ಮತ್ತೆ ಮತ್ತೆ ಕೊಲೆ ಬೆದರಿಕೆ ಹಾಕಲಾಗುತ್ತಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8409 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment