ವಿವಾದಾತ್ಮಕ ಹೇಳಿಕೆಗಳಿಂದ ಸುದ್ದಿಗ್ರಾಸವಾಗಿರುವ ಸಚಿವ ಉದಯನಿಧಿ ಸ್ಟಾಲಿನ್ ತಮಿಳುನಾಡಿನ ಡಿಎಂಕೆ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿಯಾಗಿ ಬಡ್ತಿ ಪಡೆಯುವ ಸಾಧ್ಯತೆ ಇದೆ.
ಪ್ರಸ್ತುತ ತಮಿಳುನಾಡು ಸರ್ಕಾರದಲ್ಲಿ ಕ್ರೀಡಾ ಸಚಿವರಾಗಿರುವ ಉದಯನಿಧಿ ಸ್ಟಾಲಿನ್ ಅವರನ್ನು ಶೀಘ್ರದಲ್ಲೇ ಉಪ ಮುಖ್ಯಮಂತ್ರಿಯಾಗಿ ನೇಮಕಗೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಚೆಪಾಕ್-ತಿರುವೆಲ್ಲಿಕೇನಿ ಕ್ಷೇತ್ರದಿಂದ ಆಯ್ಕೆಯಾಗಿರುವ ಉದಯನಿಧಿ ಸ್ಟಾಲಿನ್ ಡಿಎಂಕೆ ಪಕ್ಷದ ಯುವ ಘಟಕದ ಅಧ್ಯಕ್ಷರೂ ಆಗಿದ್ದಾರೆ.
ಡಿಎಂಕೆ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಎರಡು ಬಾರಿ ಉದಯನಿಧಿ ಸ್ಟಾಲಿನ್ ಅವರನ್ನು ಆಯ್ಕೆ ಮಾಡಲು ವೇದಿಕೆ ಸಿದ್ದವಾಗಿತ್ತು .ಆದರೆ ವಿವಾದಗಳ ಹಿನ್ನೆಲೆಯಲ್ಲಿ ಮುಂದೂಡುತ್ತಾ ಬರಲಾಗಿತ್ತು. ಇದೀಗ ವೇದಿಕೆ ಸಿದ್ದವಾಗಿದ್ದು, ಶೀಘ್ರದಲ್ಲೇ ಅಧಿಕೃತ ಘೋಷಣೆ ಹೊರಬೀಳಲಿದೆ ಎಂದು ಹೇಳಲಾಗಿದೆ.
ಜನವರಿಯಲ್ಲಿ ಡಿಸಿಎಂ ಮಾಡಲು ಡಿಎಂಕೆ ಮುಂದಾಗಿತ್ತು. ಆದರೆ ಈ ವೇಳೆ ಉದಯನಿಧಿ ಸ್ಟಾಲಿನ್ ಸನಾತನ ಧರ್ಮದ ಕುರಿತು ನೀಡಿದ ಹೇಳಿಕೆ ಭಾರೀ ವಿವಾದ ಸೃಷ್ಟಿಸಿತ್ತು. ಉದಯನಿಧಿ ಮಾರನ್ ಸನಾತನ ಧರ್ಮ ಮಲೇರಿಯಾ, ಡೆಂಗ್ಯೂ ಇದ್ದಂತೆ ಎಂದು ಹೇಳಿಕೆ ನೀಡಿದ್ದರು.