Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
Uncategorized

ರಾಜ್ಯದಲ್ಲಿ 4618 ಕೆರೆಗಳ ಒತ್ತುವರಿ ತೆರವು, 8697 ಎಕರೆ ಭೂಮಿ ವಶಕ್ಕೆ: ಪ್ರಿಯಾಂಕ್ ಖರ್ಗೆ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 22 ವೀಕ್ಷಣೆಗಳು
priyank kharge

ರಾಜ್ಯಾದ್ಯಂತ ಜಿಲ್ಲಾ ಪಂಚಾಯತಿಗಳ ಅಧೀನದಲ್ಲಿನ ಕೆರೆಗಳನ್ನು ಗುರುತಿಸುವ ಹಾಗೂ ಒತ್ತುವರಿ ತೆರವುಗೊಳಿಸುವ ಕಾರ್ಯವನ್ನು ಚುರುಕುಗೊಳಿಸಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಜಿಲ್ಲಾ ಪಂಚಾಯತಿಗಳ ವ್ಯಾಪ್ತಿಗೆ ಬರುವ ಕೆರೆಗಳ ಸಮೀಕ್ಷೆ ಕಾರ್ಯವನ್ನು ಎಲ್ಲಾ ಜಿಲ್ಲೆಗಳಲ್ಲಿ ಕೈಗೊಂಡಿದ್ದು ಒತ್ತುವರಿಯಾಗಿದ್ದ 9140 ಕೆರೆಗಳನ್ನು ಈಗಾಗಲೆ ಗುರುತಿಸಲಾಗಿದ್ದು, ಈ ಪೈಕಿ 4618 ಕೆರೆಗಳ ಒತ್ತುವರಿಯನ್ನು ತೆರವುಗೊಳಿಸಿ ಇಲಾಖೆಯ ವಶಕ್ಕೆ ಪಡೆಯಲಾಗಿದೆ ಎಂದರು.

ರಾಜ್ಯದ ಜಿಲ್ಲಾ ಪಂಚಾಯತಿಗಳ ವ್ಯಾಪ್ತಿಯಲ್ಲಿ 32648 ಕೆರೆಗಳಿದ್ದು, ಇಲಾಖೆ ಕೈಗೊಂಡಿರುವ ಸಮೀಕ್ಷೆಯಲ್ಲಿ 24497 ಕೆರೆಗಳನ್ನು ಗುರುತಿಸಲಾಗಿದೆ, ಇವುಗಳಲ್ಲಿ 9140 ಕೆರೆಗಳು ಒತ್ತುವರಿಗೊಂಡಿದ್ದವು ಎಂದು ಸಚಿವರು ತಿಳಿಸಿದರು.

ಒತ್ತುವರಿಗೊಂಡ ಕೆರೆಗಳಲ್ಲಿ 4618 ಕೆರೆಗಳ ಒತ್ತುವರಿಯನ್ನು ತೆರೆವುಗೊಳಿಸಲಾಗಿದ್ದು, 8697 ಎಕರೆ ಭೂಮಿಯನ್ನು ಜಿಲ್ಲಾ ಪಂಚಾಯತಿಗಳ ವಶಕ್ಕೆ ಪಡೆದುಕೊಳ್ಳಲಾಗಿದೆ, ಒತ್ತುವರಿ ಗುರುತಿಸಲ್ಪಟ್ಟಿರುವ ಉಳಿದ 4522 ಕೆರೆಗಳನ್ನು ತೆರವುಗೊಳಿಸುವ ಕೆಲಸ ಪ್ರಗತಿಯಲ್ಲಿದೆ ಎಂದು ಅವರು ನುಡಿದರು.

ಒಟ್ಟಾರೆ 32648 ಕೆರೆಗಳಲ್ಲಿ ಸಮೀಕ್ಷೆ ಬಾಕಿ ಇರುವ 8151 ಕೆರೆಗಳ ಸಮೀಕ್ಷೆಯನ್ನು ಮುಂದಿನ 30 ದಿನಗಳ ಒಳಗೆ ಮುಗಿಸಬೇಕೆಂದು ಸಚಿವ ಪ್ರಿಯಾಂಕ್ ಖರ್ಗೆ ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚಿಸಿದ್ದು, ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಅವರು ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡುವ ಮೂಲಕ ಸಮೀಕ್ಷೆ ಕಾರ್ಯವನ್ನು ಮುಗಿಸಲು ಕ್ರಮ ಕೈಗೊಳ್ಳಬೇಕೆಂದು ಹೇಳಿದರು.

ಜಿಲ್ಲಾ ಪಂಚಾಯತಿಗಳ ವ್ಯಾಪ್ತಿಗೆ ಬರುವ 32648 ಕೆರೆಗಳು 3,08,213 ಎಕರೆ ಪ್ರದೇಶವನ್ನು ಹೊಂದಿದೆ, ಇವುಗಳಲ್ಲಿ 2,15,594 ಎಕರೆಗೆ ಸಂಬಂಧಿಸಿದಂತೆ 24497 ಕೆರೆಗಳ ಸರ್ವೆ ಕಾರ್ಯ ಸಂಪನ್ನಗೊಂಡಿದೆ ಎಂದು ಪ್ರಿಯಾಂಕ್ ಖರ್ಗೆ ವಿವರಿಸಿದರು.

ರಾಜ್ಯದಲ್ಲಿ ಹಾಸನ ಜಿಲ್ಲೆ ಅತಿ ಹೆಚ್ಚು 6367 ಕೆರೆಗಳನ್ನು ಹೊಂದಿದ್ದು, ಬಳ್ಳಾರಿ ಜಿಲ್ಲೆ ಅತಿ ಕಡಿನೆ 21 ಕೆರೆಗಳನ್ನು ಹೊಂದಿದೆ, ಹೆಚ್ಚು ಕೆರೆಗಳನ್ನು ಹೊಂದಿದ ಜಿಲ್ಲೆಗಳಲ್ಲಿ ಶಿವಮೊಗ್ಗ (4354) ಹಾಗೂ ಮೈಸೂರು (2805) ಎರಡು ಹಾಗೂ ಮೂರನೆ ಸ್ಥಾನಗಳಲ್ಲಿವೆ,

ಅತಿ ಕಡಿಮೆ ಕೆರೆಗಳ ಮುಂದಿನ ಸ್ಥಾನಗಳು ಕಲಬುರಗಿ (33) ಮತ್ತು ಕೊಪ್ಪಳ (39) ಜಿಲ್ಲೆಗಳದು ಎಂಬ ಸಂಗತಿ ಸಮೀಕ್ಷೆಯಿಂದ ತಿಳಿದು ಬಂದಿದೆ ಎಂದು ಅವರು ಅಂಕಿ ಅಂಶ ನೀಡಿದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment