Thursday, November 21, 2024
Google search engine
HomeUncategorizedbengaluru tech summit ಸ್ಟಾರ್ಟಪ್ ಉದ್ಯಮಗಳಲ್ಲಿ ಕರ್ನಾಟಕ ಅಗ್ರಸ್ಥಾನ: ಸಿಎಂ ಸಿದ್ದರಾಮಯ್ಯ

bengaluru tech summit ಸ್ಟಾರ್ಟಪ್ ಉದ್ಯಮಗಳಲ್ಲಿ ಕರ್ನಾಟಕ ಅಗ್ರಸ್ಥಾನ: ಸಿಎಂ ಸಿದ್ದರಾಮಯ್ಯ

ಕರ್ನಾಟಕದಲ್ಲಿ ಸ್ಟಾರ್ಟಪ್ ಗಳಿಗೆ ಉತ್ತಮ ವಾತಾವರಣ ಇದ್ದು, ದೇಶದಲ್ಲಿ ಅತೀ ಹೆಚ್ಚು ಸ್ಟಾರ್ಟಪ್ ಗಳನ್ನು ಹೊಂದುವ ಮೂಲಕ ಅಗ್ರಸ್ಥಾನದಲ್ಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಂಗಳವಾರ ಬೆಂಗಳೂರು ಟೆಕ್ ಸಮ್ಮಿಟ್ 2024 ಉದ್ಘಾಟಿಸಿ ಮಾತನಾಡಿದ ಅವರು,  2022ರಿಂದ 2023 ರವರೆಗೆ ಸ್ಟಾರ್ಟಪ್ ಗಳ ಬೆಳವಣಿಗೆಯಲ್ಲಿ ಕರ್ನಾಟಕ ಶೇ. 18.2ರಷ್ಟು ಏರಿಕೆ  ಕಂಡಿದೆ ಎಂದರು.

ರಾಜ್ಯದಲ್ಲಿ ಒಟ್ಟಾರೆ 3,036 ಸ್ಟಾರ್ಟಪ್‌ಗಳನ್ನು ಹೊಂದಿದ್ದು, ದೇಶಕ್ಕೆ ಹೋಲಿಸಿದರೆ ಶೇ. 8.7ರಷ್ಟು  ಸ್ಟಾರ್ಟ ಪ್ ಹೊಂದಿರುವ ಮೂಲಕ ಕರ್ನಾಟಕ  ಅಗ್ರಸ್ಥಾನದಲ್ಲಿದೆ. ಈ ಯಶಸ್ಸು ಉದ್ಯಮಿಗಳಿಗೆ ನಮ್ಮ  ಬೆಂಬಲ ಮತ್ತು  ವೈವಿಧ್ಯಮಯ ಅವಕಾಶಗಳನ್ನು ಬಿಂಬಿಸುತ್ತದೆ ಎಂದು ಅವರು ಹೇಳಿದರು.

ನಾವೀನ್ಯತೆ, ತಂತ್ರಜ್ಞಾನದ ಪ್ರಗತಿ ಮತ್ತು ಜಾಗತಿಕ ಸಹಯೋಗಕ್ಕಾಗಿ ಈ ಸಮ್ಮಿಟ್ ವಿಶಿಷ್ಟ ವೇದಿಕೆಯಾಗಿದೆ. ಭಾರತದ ತಂತ್ರಜ್ಞಾನ ಪರಿವರ್ತನೆಯಲ್ಲಿ ಮುಂಚೂಣಿಯಲ್ಲಿರುವ ರಾಜ್ಯ ಕರ್ನಾಟಕವನ್ನು ಪ್ರತಿನಿಧಿಸುತ್ತಿರುವುದು ನನಗೆ ಅತ್ಯಂತ ಹೆಮ್ಮೆಯ ಸಂಗತಿಯಾಗಿದೆ ಎಂದು ಅವರು ಹೇಳಿದರು.

20ನೇ ಶತಮಾನದ ಆರಂಭದಲ್ಲಿ  ಬೆಂಗಳೂರು ಏರೋಸ್ಪೇಸ್ ಮತ್ತು ರಕ್ಷಣಾ ಉತ್ಪಾದನೆಯ ಕೇಂದ್ರವಾಗಿ ಬೆಳೆಯಿತು. ತನ್ಮೂಲಕ ಕೈಗಾರಿಕಾ ಬೆಳವಣಿಗೆಗೆ ಇಂಬು ನೀಡಿತು. 2000 ಇಸವಿಯ ಆರಂಭದಲ್ಲಿ ಎಸ್.ಎಂ.ಕೃಷ್ಣ ಅವರ   ದೂರದೃಷ್ಟಿಯ ನಾಯಕತ್ವದಲ್ಲಿ,  ಎಲೆಕ್ಟ್ರಾನಿಕ್ ಸಿಟಿ ಮತ್ತು ಐಟಿ ಪಾರ್ಕ್ ಪ್ರಾರಂಭಿಸಿ ಬೆಂಗಳೂರು  ಪರಿವರ್ತನೆಯ ಕಡೆಗೆ ಹೊರಳಿಕೊಂಡಿತು. ಈ ಮೂಲಕ ನಗರದ ಜಾಗತಿಕ ಟೆಕ್ ಎಂಬ ಪ್ರಖ್ಯಾತಿ ಪಡೆಯಲು ತಳಪಾಯ  ಹಾಕಲಾಯಿತು ಎಂದು ಸಿದ್ದರಾಮಯ್ಯ ವಿವರಿಸಿದರು.

ಸಾಫ್ಟ್ ವೇರ್, ಬಯೋ ಟೆಕ್ನಾಲಜಿ, ಏರೋಸ್ಪೇಸ್ ಹಾಗು ಅಭಿವೃದ್ಧಿಗೊಂಡ ಉತ್ಪಾದನೆಯಲ್ಲಿ ತನ್ನ ಪ್ರಭಾವಕ್ಕಾಗಿ ಬೆಂಗಳೂರು ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಲ್ಪಟ್ಟಿದೆ. ವಿಶ್ವದಾದ್ಯಂತ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ನಗರವೆಂದು ತನ್ನನ್ನು ಸ್ಥಾಪಿಸಿಕೊಂಡಿದೆ. ಐ. ಟಿ, ಡೀಪ್ ಟೆಕ್, ಬಯೋ ಟೆಕ್ನಾಲಜಿ ಮತ್ತು ಜೀವ ವಿಜ್ಞಾನ ಕ್ಷೇತ್ರಗಳಲ್ಲಿ ಪ್ರಗತಿಯನ್ನು  ರಾಜ್ಯದ ವ್ಯಾಪಕ ಪ್ರತಿಭೆ, ಪ್ರವರ್ಧಮಾನಕ್ಕೆ ಬರುತ್ತಿರುವ ಸ್ಟಾರ್ಟ್ ಅಪ್ ಪರಿಸರ ಮತ್ತು ಸದೃಢವಾದ ಮೂಲಸೌಕರ್ಯ ವ್ಯವಸ್ಥೆ  ಉತ್ತೇಜಿಸಿದೆ ಎಂದು ಅವರು ವಿವರಿಸಿದರು.

ಭಾರತದ ಮೊದಲ ಗ್ಲೋಬಲ್ ಕೆಪೆಬಿಲಿಟಿ ಸೆಂಟರ್ ನೀತಿಯನ್ನು ಕರ್ನಾಟಕ ಜಾರಿಗೆ ತಂದಿದ್ದು, ಈ ಕೇಂದ್ರಗಳನ್ನು ಸಶಕ್ತಹೋಲಿಸಲು  ಹಾಗೂ ಬೆಂಬಲಿಸಲು ಉದ್ದೇಶಿಸಿದೆ.ಇದರ ಮುಂದುವರೆದ ಭಾಗವಾಗಿ ಬೆಂಗಳೂರು, ಮೈಸೂರು ಹಾಗೂ ಬೆಳಗಾವಿಯಲ್ಲಿ ಮೂರು ಜಾಗತಿಕ ನಾವೀನ್ಯತಾ ಜಿಲ್ಲೆಗಳನ್ನು  ಸ್ಥಾಪಿಸಲಾಗುವುದು ಎಂದು ಘೋಷಿಸಲು ನನಗೆ ಹೆಮ್ಮೆ ಎನಿಸಿದೆ. ರಾಜ್ಯದಲ್ಲಿ ಜಿಸಿಸಿಗಳನ್ನು ಸ್ಥಾಪಿಸಲು  ಈ  ಪಾರ್ಕ್ ಗಳು  ಮೀಸಲಾಗಿರುತ್ತದೆ ಎಂದು ಅವರು ನುಡಿದರು.

ಬೆಂಗಳೂರು ಜಾಗತಿಕ ನಾವೀನ್ಯತಾ ಜಿಲ್ಲೆಯು ಜ್ಞಾನ, ಆರೋಗ್ಯ ಮತ್ತು ನಾವೀನ್ಯತೆಯ ನಗರದ ಭಾಗವಾಗಿರಲಿದೆ(ಕ್ವಿನ್ ಸಿಟಿ). ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಕೇವಲ 45 ನಿಮಿಷಗಳ ಅಂತರದಲ್ಲಿದ್ದು, ನಾವೀನ್ಯತೆ ಮತ್ತು ಸಂಶೋಧನೆಗೆ ಜಾಗತಿಕ ಕೇಂದ್ರವಾಗಿ ಪರಿಣಮಿಸಲಿದೆ ಎಂದು ಅವರು ಹೇಳಿದರು.

ಇಂಜಿನಿಯರಿಂಗ್ ಪ್ರತಿಭೆ ಮತ್ತು ಜಾಗತಿಕವಾಗಿ  ಅತ್ಯಧಿಕ ಎ ಐ ವೃತ್ತಿಪರರನ್ನು ಹೊಂದಿರುವ ಕರ್ನಾಟಕ ಜಿಸಿಸಿಗಳಿಗೆ ಅತಿ ಪ್ರಿಯವಾದ ಗಮ್ಯವಾಗಿದೆ. ಎನ್ ಐ ಪಿ ಯು ಎನ್ ಎ ಕರ್ನಾಟಕದಡಿಯಲ್ಲಿ  ಕೈಗಾರಿಕೆಗಳಲ್ಲಿ ಕಾರ್ಯನಿರ್ವಹಿಸಲು ಸಿದ್ದರಿರುವ ಕಾರ್ಮಿಕಪಡೆಯನ್ನು ತಯಾರು ಮಾಡಲು  ನಾವು ಕೈಗೊಂಡ ಯೋಜನೆಗಳು ಇನ್ನಷ್ಟು ಬಲಪಡಿಸಲಿವೆ. ಈಗ ತಾನೇ  ಮೈಕ್ರೋ ಸಾಫ್ಟ್, ಇಂಟೆಲ್ , ಆಕ್ಸೆಂಚರ್ , ಐ.ಬಿ.ಎಂ ಮತ್ತು ಬಿ ಎಫ್ ಎಸ್  ಕಾಂಸಾರ್ಟಿಯಂ  ಜೊತೆಗೆ  ಸಹಿ ಹಾಕಲಾದ ಐದು ಒಪ್ಪಂದಗಳು ಕರ್ನಾಟಕದ ಒಂದು ಲಕ್ಷ  ವ್ಯಕ್ತಿಗಳನ್ನು ಕೌಶಲಯುಕ್ತ ಗೊಳಿಸಲಿದೆ ಎಂದು ವಿವರಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments