Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
Uncategorized

ರಾಜ್ಯಾದ್ಯಂತ ಭಾರಿ ಮಳೆ ಎಚ್ಚರಿಕೆ: 7 ಜಿಲ್ಲೆಗಳಲ್ಲಿ ಆರೆಂಜ್​​ ಅಲರ್ಟ್

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 24 ವೀಕ್ಷಣೆಗಳು
mansoon

ಬೆಂಗಳೂರು:ಕರಾವಳಿ ಕರ್ನಾಟಕ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಕರ್ನಾಟಕದ ಅನೇಕ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಭಾರೀ ಮಳೆ, ಗುಡುಗು-ಮಿಂಚು ಹಾಗೂ ಬಿರುಗಾಳಿಯ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಭಾರಿ ಮಳೆಯ ಸಾಧ್ಯತೆ ಹಿನ್ನೆಲೆಯಲ್ಲಿ ಕೆಲ ಜಿಲ್ಲೆಗಳಲ್ಲಿ ಯೆಲ್ಲೋ ಮತ್ತು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೀದರ್​​ ಮತ್ತು ಕಲಬುರಗಿ ಜಿಲ್ಲೆಗಳನ್ನು ಹೊರತುಪಡಿಸಿ ರಾಜ್ಯಾದ್ಯಂತ ಮಂಗಳವಾರ ಮಳೆಯಾಗಲಿದ್ದು, ಆ ಪೈಕಿ 7 ಜಿಲ್ಲೆಗಳಲ್ಲಿ ಆರೆಂಜ್​​ ಅಲರ್ಟ್​​ ಘೋಷಿಸಲಾಗಿದೆ.

ಕೊಪ್ಪಳ, ಧಾರವಾಡ, ಗದಗ, ವಿಜಯನಗರ, ಹಾವೇರಿ, ದಾವಣಗೆರೆ ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ನಾಳೆ ಆರೆಂಜ್​​ ಅಲರ್ಟ್​​ ಘೋಷಿಸಲಾಗಿದೆ. ಉಳಿದಂತೆ ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಬಳ್ಳಾರಿ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿತ್ರದುರ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ನೈಸೂರು, ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ ಮತ್ತು ಮೈಸೂರಿನಲ್ಲಿಯೂ ಮಳೆಯ ಮುನ್ಸೂಚನೆಯಿದೆ.

ರಾಜ್ಯದಾದ್ಯಂತ ಒಣ ಹವೆ ಹಾಗೂ ಬಿಸಿಲಿನ ವಾತಾವರಣ ಮುಂದುವರಿಯುವ ಸಾಧ್ಯತೆಯಿದ್ದು, ಮಧ್ಯಾಹ್ನ ನಂತರ, ಅಲ್ಲಲ್ಲಿ ಮೋಡ ಕವಿದ ವಾತಾವರಣ ಇರುವ ಸಾಧ್ಯತೆಯಿದೆ, ಹಾಗೂ ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು, ಸಿಡಿಲು ಸಹಿತ ಜೋರಾದ ಗಾಳಿಯೊಂದಿಗೆ ಹಗುರದಿಂದ ಉತ್ತರ ಒಳನಾಡು ಭಾಗದಲ್ಲಿ ಮೇ 21ರವರೆಗೆ ಮಳೆಯ ಚಟುವಟಿಕೆ ಮುಂದುವರಿಯುವ ನಿರೀಕ್ಷೆಯಿದೆ.

ಹವಾಮಾನದಲ್ಲಿ ಸ್ವಲ್ಪ ಸುಧಾರಣೆ ಕಾಣಬಹುದು. ದಕ್ಷಿಣ ಒಳನಾಡಿನ ಕೆಲವೆಡೆ ಭಾರೀ ಮಳೆಯೊಂದಿಗೆ ಗುಡುಗು-ಮಿಂಚಿನ ಸಾಧ್ಯತೆಯಿದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ, ಮಧ್ಯಾಹ್ನದ ಬಳಿಕ ಮೋಡಗಟ್ಟುವಿಕೆ ಹಾಗೂ ಸಂಜೆ ವೇಳೆಗೆ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

ಬೆಂಗಳೂರಿನಲ್ಲಿ ಭಾರೀ ಮಳೆ

ಬೆಂಗಳೂರಿನ ಪ್ರಮುಖ ಭಾಗಗಳಲ್ಲಿ ಸೋಮವಾರ ಸಂಜೆ ಗುಡುಗು, ಸಿಡಿಲು ಸಹಿತ ಭಾರೀ ಗಾಳಿ ಮಳೆ ಸುರಿದು ಪ್ರಮುಖ ರಸ್ತೆಗಳು ಸಂಪೂರ್ಣವಾಗಿ ಜಲಾವೃತಗೊಂಡು ವಾಹನ ಸಂಚಾರ ಅಸ್ತವ್ಯಸ್ತಗೊಂಡಿದ್ದವು.

ಎಂಜಿ ರಸ್ತೆ, ಬ್ರಿಗೇಡ್‌ ರೋಡ್‌, ಕಬ್ಬನ್ ಪಾರ್ಕ್‌ ರಸ್ತೆ, ವಿಧಾನಸೌಧ, ಶಿವಾನಂದ ಸರ್ಕಲ್, ಜಯನಗರ, ಜೆಪಿ ನಗರ ಸೇರಿದಂತೆ ಹಲವೆಡೆ ಭಾರೀ ಮಳೆಯಾಗಿದೆ. ಹೆಬ್ಬಾಳ ಸೇರಿದಂತೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೋಗುವ ಮಾರ್ಗದಲ್ಲಿ ಮಳೆಯಿಂದ ಗಂಟೆಗಟ್ಟಲೆ  ಸಂಚಾರ ದಟ್ಟಣೆ ಉಂಟಾಗಿತ್ತು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment