Saturday, July 6, 2024
Google search engine
HomeUncategorizedಜಮ್ಮು ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ: ಒಬ್ಬ ಯೋಧ ಹುತಾತ್ಮ, 6 ಮಂದಿಗೆ ಗಾಯ

ಜಮ್ಮು ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ: ಒಬ್ಬ ಯೋಧ ಹುತಾತ್ಮ, 6 ಮಂದಿಗೆ ಗಾಯ

ಎರಡು ದಿನಗಳ ಹಿಂದೆಯಷ್ಟೇ ಯಾತ್ರಿಗಳ ಬಸ್ ಮೇಲೆ ಗುಂಡಿನ ದಾಳಿ ನಡೆಸಿದ್ದ ಉಗ್ರರು ಇದೀಗ ಮತ್ತೆ ಜಮ್ಮು ಕಾಶ್ಮೀರದಲ್ಲಿ ದಾಳಿ ನಡೆಸಿದ್ದು, ಒಬ್ಬ ಸಿಆರ್ ಪಿಎಫ್ ಯೋಧ ಹುತಾತ್ಮರಾಗಿದ್ದರೆ, 6 ಮಂದಿ ಗಾಯಗೊಂಡಿದ್ದಾರೆ.

ಮಂಗಳವಾರ ರಾತ್ರಿ ಕತುವಾ ಜಿಲ್ಲೆಯಲ್ಲಿ ಉಗ್ರರು ದಾಳಿ ನಡೆಸಿದ್ದಾರೆ. ಇದರ ಬೆನ್ನಲ್ಲೇ ಭಾರತದ ಭದ್ರತಾ ಪಡೆಗಳು ಎರಡು ಕಡೆ ಕಾರ್ಯಾಚರಣೆ ಆರಂಭಿಸಿದ್ದು, ದೋಡಾ ಜಿಲ್ಲೆಯಲ್ಲಿ ಒಬ್ಬ ಯೋಧ ಹುತಾತ್ಮರಾಗಿದ್ದರೆ, ಮತ್ತೊಂದು ತಂಡದಲ್ಲಿದ್ದ ವಿಶೇಷ ಪೊಲೀಸ್ ಆಫೀಸರ್ ಗಂಭೀರವಾಗಿ ಗಾಯಗೊಂಡಿದ್ದಾರೆ.

ಮೂರು ದಿನಗಳ ಹಿಂದೆಯಷ್ಟೇ ಉಗ್ರರು ಯಾತ್ರಿಗಳ ಬಸ್ ಮೇಲೆ ಗುಂಡಿನ ದಾಳಿ ನಡೆಸಿದ್ದರಿಂದ 10 ಮಂದಿ ಅಸುನೀಗಿದ್ದರು. ಈ ಘಟನೆ ಬೆನ್ನಲ್ಲೇ ಮತ್ತೊಂದು ದಾಳಿ ನಡೆದಿದ್ದು, ಕಣಿವೆ ರಾಜ್ಯದಲ್ಲಿ ಉಗ್ರರ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments