Wednesday, October 30, 2024
Google search engine
HomeUncategorizedಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಆಧಾರ್ ಕಡ್ಡಾಯ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಸ್ತಾಪ

ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಆಧಾರ್ ಕಡ್ಡಾಯ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಸ್ತಾಪ

ಮುಂದಿನ ವರ್ಷದಿಂದ ಎಲ್ಲಾ ವೃತ್ತಿಪರ ಕೋರ್ಸ್​ಗಳ ನೋಂದಣಿಗೆ ವಿದ್ಯಾರ್ಥಿಗಳ ಆಧಾರ್ ಕಾರ್ಡ್ ಲಿಂಕ್ ಮಾಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಶಿಫಾರಸು ಮಾಡಿದೆ.

ಸೀಟ್​ ಬ್ಲಾಕಿಂಗ್ ದಂಧೆಯನ್ನು ಪರಿಣಾಮಕಾರಿಯಾಗಿ ತಡೆಗಟ್ಟುವ ಉದ್ದೇಶದಿಂದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸ್ಪರ್ಧಾತ್ಮಕ ಪರೀಕ್ಷೆ ನೋಂದಣಿಗೆ ವಿದ್ಯಾರ್ಥಿಗಳ ಆಧಾರ್ ಕಾರ್ಡ್ ಲಿಂಕ್ ಮಾಡಲು ಇ-ಆಡಳಿತ ಇಲಾಖೆಗೆ ಶಿಫಾರಸು ಮಾಡಿದೆ.

ಭಾರತ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ: ಇ-ಆಡಳಿತ ಇಲಾಖೆಯು ನಮ್ಮ ಪ್ರಸ್ತಾಪದ ಪರವಾಗಿದೆ ಮತ್ತು ಅವರು ಅನುಮೋದನೆಗಾಗಿ ನಮ್ಮ ಪ್ರಸ್ತಾಪವನ್ನು ಭಾರತ ಸರ್ಕಾರಕ್ಕೆ ಕಳುಹಿಸಿದ್ದಾರೆ. ಶೀಘ್ರದಲ್ಲೇ ಅನುಮೋದನೆ ಸಿಗಬಹುದು ಎಂಬ ನಿರೀಕ್ಷೆಯಲ್ಲಿದ್ದೇವೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ಪಿಟಿಐಗೆ ತಿಳಿಸಿದ್ದಾರೆ.

ಪರೀಕ್ಷೆ ಬರೆಯುವ ಅಭ್ಯರ್ಥಿ ಗುರುತು ಪತ್ತೆ ಅಧಿಕೃತ ಮಾಹಿತಿ ಪಡೆಯಲು ನೋಂದಣಿಯಲ್ಲಿ ಅಕ್ರಮ ತಡೆಗಟ್ಟಲು ಮತ್ತು ವಿದ್ಯಾರ್ಥಿಗಳು ತಮ್ಮ ಮೊಬೈಲ್ ಫೋನ್​ಗಳಲ್ಲಿಯೇ ಪರೀಕ್ಷೆಗೆ ಸಂಬಂಧಿಸಿದ ಮಾಹಿತಿಯನ್ನು ಪಡೆಯಲು ಅನುಕೂಲವಾಗುವಂತೆ ಆಧಾರ್-ಲಿಂಕ್ಡ್ ನೋಂದಣಿಯನ್ನು ಪ್ರಸ್ತಾಪಿಸಲಾಗಿದೆ. ವಿವಿಧ ಇಲಾಖೆಗಳಿಗೆ ಕೆಇಎ ನಡೆಸುವ ನೇಮಕಾತಿ ಪರೀಕ್ಷೆಗಳಿಗೂ ಆಧಾರ್ ಲಿಂಕ್ ಮಾಡಿದ ನೋಂದಣಿಯನ್ನು ಪರಿಚಯಿಸುವ ಯೋಜನೆಯೂ ಇದೆ ಎಂದು ಅವರು ಹೇಳಿದರು.

ಎಂಜಿನಿಯರಿಂಗ್ ಸೀಟು ಹಂಚಿಕೆಯ ಎಲ್ಲಾ ಸುತ್ತುಗಳು ಪೂರ್ಣಗೊಂಡ ನಂತರ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (ಕೆಸಿಇಟಿ) ಕೋಟಾದಡಿ ಸೀಟ್ ಬ್ಲಾಕಿಂಗ್ ಹಗರಣ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಕೆಇಎ ಈ ಕ್ರಮ ಕೈಗೊಂಡಿದೆ. ಹಲವಾರು ವಿದ್ಯಾರ್ಥಿಗಳು ಒಂದೇ ಐಪಿ ವಿಳಾಸವನ್ನು ಬಳಸಿಕೊಂಡು ಸೀಟುಗಳನ್ನು ಬ್ಲಾಕ್ ಮಾಡಿದ್ದಾರೆ ಮತ್ತು ಅವರು ಕೆಇಎಗೆ ನೀಡಿದ ಮೊಬೈಲ್ ಸಂಖ್ಯೆಗಳು ಮತ್ತು ಇಮೇಲ್ ಐಡಿಗಳು ನಕಲಿ ಅಥವಾ ತಪ್ಪು ಎಂದು ಕಂಡುಬಂದಿದೆ.

ಅಧಿಕಾರಿಗಳ ಪ್ರಕಾರ, ಕೆಲ ಸಂದರ್ಭಗಳಲ್ಲಿ ಉನ್ನತ ಕಾಲೇಜುಗಳಲ್ಲಿ ಬೇಡಿಕೆಯ ವಿಭಾಗಗಳಲ್ಲಿ ಸೀಟುಗಳನ್ನು ಆರಿಸಿಕೊಂಡ ವಿದ್ಯಾರ್ಥಿಗಳು ಆ ಕಾಲೇಜುಗಳಿಗೆ ದಾಖಲಾಗದಿರುವುದು ಕಂಡುಬಂದಿದೆ. ಇದರ ಪರಿಣಾಮದಿಂದ ಕೆಸಿಇಟಿ ಕೋಟಾದಡಿ ಬರುವ ಅಂಥ ಎಲ್ಲಾ ಸೀಟುಗಳು ಮ್ಯಾನೇಜ್ ಮೆಂಟ್ ಕೋಟಾಕ್ಕೆ ಸೇರುವಂತಾಗುತ್ತದೆ. ಈ ಸಂದರ್ಭಗಳಲ್ಲಿ ಸೀಟ್ ಬ್ಲಾಕಿಂಗ್ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ, ಮೂರನೇ ವ್ಯಕ್ತಿಗಳು ಕಾಲೇಜು ಆಡಳಿತ ಮಂಡಳಿಗಳೊಂದಿಗೆ ಮತ್ತು ಕೆಲವು ಸಂದರ್ಭಗಳಲ್ಲಿ ವಿದ್ಯಾರ್ಥಿಗಳೊಂದಿಗೆ ಶಾಮೀಲಾಗಿರಬಹುದು ಎಂದು ಹೇಳಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments