Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
Uncategorized

ಕೋಗಿಲುನಲ್ಲಿ ಮನೆ ಕಳೆದುಕೊಂಡವರಿಗೆ ಹೊಸ ವರ್ಷದ ದಿನ ಹೊಸ ಮನೆ ಹಂಚಿಕೆ: ಸಿಎಂ ಸಿದ್ದರಾಮಯ್ಯ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
4 ನಿಮಿಷ ಓದು 30 ವೀಕ್ಷಣೆಗಳು

ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಮನೆ ಕಳೆದುಕೊಂಡ 167 ಕುಟುಂಬಗಳಿಗೆ ಜನವರಿ 1 ಹೊಸ ವರ್ಷದಂದು ಹೊಸ ಮನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಬೆಂಗಳೂರಿನಲ್ಲಿ ಸೋಮವಾರ ಅಧಿಕಾರಿಗಳ ಜೊತೆ ಸಭೆ ನಡೆಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕೋಗಿಲುನಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಶೆಡ್ ಗಳನ್ನು ನಿರ್ಮಿಸಿಕೊಂಡಿದ್ದ ಸುಮಾರು 167 ಶೆಡ್‌ಗಳನ್ನು ತೆರವುಗೊಳಿಸಲಾಗಿತ್ತು. ಅವರೆಲ್ಲರಿಗೂ ನೋಟಿಸ್ ನೀಡಿ, ಸರ್ಕಾರದ ಜಾಗವಾಗಿದ್ದು ತೆರವು ಮಾಡುವಂತೆ ಅವರ ಗಮನಕ್ಕೂ ತರಲಾಗಿತ್ತು, ಆದರೂ ಅವರು ಖಾಲಿ ಮಾಡಿರಲಿಲ್ಲ. ನಿನ್ನೆ ನಾನು ವಸತಿ ಸಚಿವರಾದ ಜಮೀರ್ ಅಹ್ಮದ್ ಖಾನ್ ಮತ್ತು ನನ್ನ ರಾಜಕೀಯ ಕಾರ್ಯದರ್ಶಿಯಾದ ನಸೀರ್ ಅಹ್ಮದ್ ಅವರನ್ನು ಸ್ಥಳಕ್ಕೆ ಕಳಿಸಿಕೊಟ್ಟಿದ್ದೆ. ಇಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೂಡ ಅಧಿಕಾರಿಗಳ ಜೊತೆ ಭೇಟಿ ನೀಡಿದ್ದಾರೆ ಎಂದರು.

ಕಸ ವಿಲೇವಾರಿ ಮಾಡುವ ಉದ್ದೇಶಕ್ಕೆ 15 ಎಕರೆ ಜಮೀನನ್ನು ಜಿಲ್ಲಾಧಿಕಾರಿಗಳು ನಗರ ಪಾಲಿಕೆಗೆ ಹಸ್ತಾಂತರ ಮಾಡಿದ್ದರು. ಬಂಡೆ ಕ್ವಾರಿ ಕೂಡ ಅಲ್ಲಿದೆ. ಪಾಲಿಕೆಯವರು ಕಸ ಹಾಕುತ್ತಿದ್ದು, ಭೂಮಿ‌ ಅವರ ಸ್ವಾಧೀನದಲ್ಲೇ ಇದೆ. ನಾವು ಸುಮಾರು 2020-21 ರಿಂದ ಈ ರೀತಿ ಅಕ್ರಮವಾಗಿ ಶೆಡ್ ಕಟ್ಟಿಕೊಂಡು ವಾಸ ಮಾಡುತ್ತಿದ್ದರು, ಹೀಗಾಗಿ ಅಲ್ಲಿನ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ ಕ್ರಮ ಜರುಗಿಸುವಂತೆ ಸೂಚಿಸಿದ್ದೇನೆ. ತಹಶಿಲ್ದಾರರಿಗೆ, ಶಿರಸ್ಥೆದಾರರಿಗೆ ಗೊತ್ತಿಲ್ಲದೆ ಹೀಗೆ ಒತ್ತುವರಿ ಆಗಲು ಸಾಧ್ಯವಿಲ್ಲ. ಇನ್ನುಮುಂದೆ ಇಂತಹ ಘಟನೆ ಮರುಕಳಿಬಾರದು ಎಂಬ ಕಾರಣಕ್ಕೆ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸುತ್ತೇವೆ ಎಂಬ ಎಚ್ಚರಿಕೆ ನೀಡಿದರು.

ಇನ್ನು ಮುಂದೆ ಯಾವುದೇ ಕಾರಣಕ್ಕೂ ಸರ್ಕಾರಿ ಜಮೀನಿನ ಅಕ್ರಮ‌ ಒತ್ತುವರಿ ಆಗದಂತೆ ಕ್ರಮ ಕೈಗೊಳ್ಳಬೇಕು ಎಂದು ಸಂಬಂಧಪಟ್ಟ ಎಲ್ಲಾ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದೇನೆ. ಒಂದು ವೇಳೆ ಮನೆ ಕಟ್ಟಿದರೆ ಸಂಬಂಧಿಸಿದ ಅಧಿಕಾರಿಗಳನ್ನೇ ಜವಾಬ್ದಾರಿ ಮಾಡಲಾಗುತ್ತದೆ. ಅಕ್ರಮವಾಗಿ ಶೆಡ್‌ಗಳನ್ನು ಕಟ್ಟಿ ವಾಸವಿದ್ದವರಲ್ಲಿ ಮುಂದಿನ ಎರಡು ದಿನಗಳಲ್ಲಿ ಅರ್ಹರನ್ನು ಗುರುತಿಸಿ, ಪಟ್ಟಿ ನೀಡುವಂತೆ ಜಿಲ್ಲಾಧಿಕಾರಿ ಹಾಗೂ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಮಾನವೀಯತೆ ನೆಲೆಯಲ್ಲಿ ಅರ್ಹ ಸಂತ್ರಸ್ತರಿಗೆ ಪರ್ಯಾಯ ವ್ಯವಸ್ಥೆ ಮಾಡಿಕೊಡಬೇಕು ಎಂಬ ತೀರ್ಮಾನಕ್ಕೆ ಸರ್ಕಾರ ಬಂದಿದೆ ಎಂದು ಸ್ಪಷ್ಟಪಡಿಸಿದರು.

ಈ ವಿಚಾರದ ಬಗ್ಗೆ ದೆಹಲಿಯಲ್ಲಿ ಕೆ.ಸಿ.ವೇಣುಗೋಪಾಲ್ ಅವರು ನನ್ನೊಂದಿಗೆ ಮತ್ತು ನಂತರ ಡಿ.ಕೆ.ಶಿವಕುಮಾರ್ ಅವರ ಜೊತೆ ಚರ್ಚೆ ಮಾಡಿದ್ದಾರೆ. ಅವರಿಗೆ ಪರ್ಯಾಯ ವ್ಯವಸ್ಥೆ ಮಾಡಿಕೊಡುವ ಭರವಸೆ ನೀಡಿದ್ದೇನೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಆಯುಕ್ತರು, ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿಗಳಿಗೆ ಊಟ, ವಸತಿ, ತಾತ್ಕಾಲಿಕ ಸೂರಿನ ವ್ಯವಸ್ಥೆ ಮಾಡುವಂತೆ ಹೇಳಿದ್ದೆ, ಅದರಂತೆ ಮೂರು ಕಡೆ ಈ ರೀತಿಯ ವ್ಯವಸ್ಥೆ ಮಾಡಿದ್ದರೂ ಅಲ್ಲಿನ ನಿವಾಸಿಗಳು ಹೋಗಿಲ್ಲ. ಡಿ.ಕೆ.ಶಿವಕುಮಾರ್, ವಸತಿ ಸಚಿವರಾದ ಜಮೀರ್ ಅಹ್ಮದ್, ಸ್ಥಳೀಯ ಶಾಸಕರಾದ ಕೃಷ್ಣ ಬೈರೇಗೌಡ ಅವರ ಜೊತೆ ಮಾತನಾಡಿ, ಪರ್ಯಾಯ ವ್ಯವಸ್ಥೆ ಮಾಡುವ ಸಂಬಂಧ ಚರ್ಚಿಸಿದ್ದೇನೆ. ಅಲ್ಲೇ ಸಮೀಪದ ಬೈಯ್ಯಪ್ಪನಹಳ್ಳಿಯ ಸರ್ವೇ ನಂ‌.23 ರಲ್ಲಿ ಸುಮಾರು 1087 ಮನೆಗಳಿವೆ, ಅಧಿಕಾರಿಗಳಿಂದ ಪಟ್ಟಿ ಬಂದ ನಂತರ ಅವರಿಗೆ ಬೈಯ್ಯಪ್ಪನಹಳ್ಳಿಯ ಬಹುಮಹಡಿ ಕಟ್ಟಡದಲ್ಲಿ ಮನೆಗಳ ಹಂಚಿಕೆ ಮಾಡುತ್ತೇವೆ ಎಂದರು.

ಇದು ಕೋಗಿಲು ಇಂದ ಕೇವಲ 7 ಕಿ.ಮೀ ದೂರದಲ್ಲಿದೆ. ಒಂದು ಮನೆಗೆ ಸುಮಾರು ₹11.20 ಲಕ್ಷ ವೆಚ್ಚವಾಗಿದ್ದು, ಇವನ್ನು ಕೊಡುತ್ತೇವೆ. ಸಾಮಾನ್ಯವರ್ಗ, ಪರಿಶಿಷ್ಟ ಜಾತಿ ಮತ್ತು ವರ್ಗದವರಿಗೆ ರಾಜ್ಯ ಮತ್ತು ಕೇಂದ್ರ ಸರ್ಕಾರದ ಸಬ್ಸಿಡಿ ಲಭ್ಯವಿದೆ, ಜೊತೆಗೆ ಜಿಬಿಎ ಇಂದ ಪ್ರತಿ ಮನೆಗೆ 5 ಲಕ್ಷ ರೂಪಾಯಿ ನೀಡುವಂತೆ ಸೂಚಿಸಿದ್ದೇನೆ. ಜನರಲ್‌ಗೆ ಎಲ್ಲಾ ಸಬ್ಸಿಡಿ ಸೇರಿ 8 ಲಕ್ಷದ 70 ಸಾವಿರ ರೂಪಾಯಿ ಬರುತ್ತದೆ.

ಎಸ್‌ಸಿಎಸ್‌ಟಿಗಳಾದರೆ 9.50 ಲಕ್ಷ ಬರುತ್ತದೆ. ಆಮೇಲೆ ಜನರಲ್‌ಗೆ 2.5 ಲಕ್ಷವನ್ನು ಸಾಲದ ರೂಪದಲ್ಲಿ ಕೊಡತಕ್ಕಂತದ್ದು. ಎಸ್‌ಸಿಎಸ್‌ಟಿಗೆ 1.70 ಲಕ್ಷ ಸಾಲ. ಅದನ್ನು ಜಮೀರ್‌ ಅಹ್ಮದ್‌ ಖಾನ್‌ ಅವರು ವೆರಿಫೇಷರಿಗೆ ಸಾಲ ಕೊಡಿಸ್ತೀನಿ ಅಂತ ಒಪ್ಪಿಕೊಂಡಿದ್ದಾರೆ ಎಂದು ತಿಳಿಸಿದರು.

ನಾಳೆ, ನಾಡಿದ್ದು ಎರಡು ದಿನ ವೇರಿಫೈ ಮಾಡುತ್ತಾರೆ. ಜನವರಿ 1ರಂದು ಹೊಸ ವರ್ಷ ಪ್ರಾರಂಭದ ದಿನ ಇವರಿಗೆ ವಾಸಕ್ಕೆ ಮನೆಯನ್ನು ಒದಗಿಸಿಕೊಡುವ ಜವಾಬ್ದಾರಿಯನ್ನು ವಸತಿ ಸಚಿವರಾದ ಜಮೀರ್‌ ಅಹ್ಮದ್‌ ಖಾನ್‌ ಅವರಿಗೆ ವಹಿಸಲಾಗಿದೆ. ಅಕ್ರಮವಾಗಿ ಮನೆ ಕಟ್ಟಿಕೊಂಡು ವಾಸ ಮಾಡುತ್ತಿದ್ದರೂ, ಮಾನವೀಯತೆ ದೃಷ್ಟಿಯಿಂದ ಅವರಿಗೆ ವಾಸಕ್ಕೆ ಪರ್ಯಾಯ ವ್ಯವಸ್ಥೆಯನ್ನು ಮಾಡುತ್ತಿದ್ದೇವೆ. 1 ಲಕ್ಷ ಮನೆಗಳನ್ನು ನಾವು ಕಟ್ಟಿಸಿರುವುದೇ ಬಡವರಿಗೆ ಸೂರು ಒದಗಿಸಿಕೊಡಲೆಂದು ಎಂದರು.

ಅಕ್ರಮವಾಗಿ ಮನೆ ಕಟ್ಟಿಕೊಂಡಿರುವವರಿಗೆ ಸರ್ಕಾರದಿಂದಲೇ ಮನೆ ಕಟ್ಟಿಸಿಕೊಡುವುದು ಇದೊಂದು ಪ್ರಕರಣಕ್ಕೆ ಮಾತ್ರ ಅನ್ವಯವಾಗುತ್ತದೆ. ಅಕ್ರಮವಾಗಿ ಶೆಡ್ ನಿರ್ಮಿಸಲು ಬಿಟ್ಟ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ. ಇನ್ನು ಮುಂದೆ ಇಂತಹ ಅಕ್ರಮ ನಡೆದರೆ ಸಂಬಂಧಪಟ್ಟ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಮತ್ತೊಮ್ಮೆ ಎಚ್ಚರಿಕೆ ನೀಡಿದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment