ಭಾರತ ತಂಡ ಪಾಕಿಸ್ತಾನಕ್ಕೆ ಬರುವುದಿಲ್ಲ ಎಂದು ಸ್ಪಷ್ಟಪಡಿಸಿದ ಹಿನ್ನೆಲೆಯಲ್ಲಿ ಚಾಂಪಿಯನ್ಸ್ ಟ್ರೋಫಿ 2025ರ ಆತಿಥ್ಯದಿಂದ ಹಿಂದೆ ಸರಿಯಲು ನಿರ್ಧರಿಸಿದೆ.
ಚಾಂಪಿಯನ್ಸ್ ಟ್ರೋಫಿ ಆತಿಥ್ಯದಿಂದ ಹಿಂದೆ ಸರಿದರೆ ಏನಾಗುತ್ತದೆ ಎಂದು ಸರ್ಕಾರ ಪಾಕಿಸ್ತಾನ ಕ್ರಿಕೆಟ್ ಮಂಡಳಿಯಿಂದ ಮಾಹಿತಿ ಕೇಳಿದೆ ಎಂದು ಪಾಕಿಸ್ತಾನದ ಡಾನ್ ಪತ್ರಿಕೆ ಈ ವರದಿ ಮಾಡಿದೆ.
ಪಾಕಿಸ್ತಾನಕ್ಕೆ ಕ್ರಿಕೆಟ್ ಆಡಲು ಬರುವುದಿಲ್ಲ ಎಂದು ಬಿಸಿಸಿಐ ಸ್ಪಷ್ಟಪಡಿಸಿದೆ. ಈ ಹಿನ್ನೆಲೆಯಲ್ಲಿ ಐಸಿಸಿ ಭಾರತದ ಪಂದ್ಯಗಳನ್ನು ಅರಬ್ ದೇಶಗಳಲ್ಲಿ ಆಡಿಸುವ ಬಗ್ಗೆ ಚಿಂತನೆ ನಡೆಸಿತ್ತು.
ಪಾಕಿಸ್ತಾನದಲ್ಲಿ ಕ್ರಿಕೆಟ್ ಆಡುವುದಿಲ್ಲ ಎಂದು ಭಾರತ ಮಾತ್ರ ತಿಳಿಸಿದ್ದು, ಉಳಿದ ತಂಡಗಳು ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಅಲ್ಲದೇ ಐಸಿಸಿ ಈಗಾಗಲೇ ಪಾಕಿಸ್ತಾನ ಪಂದ್ಯಗಳ ಆತಿಥ್ಯ ವಹಿಸಿದ ಮೈದಾನಗಳ ಬಗ್ಗೆ ಪರಿಶೀಲನೆ ನಡೆಸಿ ಗ್ರೀನ್ ಸಿಗ್ನಲ್ ನೀಡಿದೆ.
ಆದರೆ ಚಾಂಪಿಯನ್ಸ್ ಟ್ರೋಫಿ ಟೂರ್ನಿಯ ಹೈಬ್ರಿಡ್ ವೇಳಾಪಟ್ಟಿ ಬಗ್ಗೆ ನಮಗೆ ಯಾವುದೇ ಮಾಹಿತಿ ಇಲ್ಲ. ನಾವು ಪಾಕಿಸ್ತಾನಕ್ಕೆ ಬಂದು ಭಾರತ ಆಡಬೇಕು ಎಂದು ಬಯಸುತ್ತೇನೆ. ಇದು ಐಸಿಸಿ ನಿಯಮ ಕೂಡ ಆಗಿದೆ. ಯಾವುದೇ ತಂಡ ಬರುವುದಿಲ್ಲ ಎಂದು ಹೇಳುವಂತಿಲ್ಲ. ಭಾರತಕ್ಕೆ ಪ್ರತ್ಯೇಕ ನಿಯಮವಿಲ್ಲ ಎಂದು ಪಿಸಿಬಿ ಹೇಳಿದೆ.