Friday, April 17, 2026
Google search engine
HomeUncategorizedಕ್ಷೇತ್ರ ಪುನರ್ ವಿಂಗಡಣೆ ಯಾವ ರಾಜ್ಯಕ್ಕೂ ಅನ್ಯಾಯವಾಗಲ್ಲ ಪ್ರಧಾನಿ ಸ್ಪಷ್ಟನೆ

ಕ್ಷೇತ್ರ ಪುನರ್ ವಿಂಗಡಣೆ ಯಾವ ರಾಜ್ಯಕ್ಕೂ ಅನ್ಯಾಯವಾಗಲ್ಲ ಪ್ರಧಾನಿ ಸ್ಪಷ್ಟನೆ

ನವದೆಹಲಿ:ಉತ್ತರ, ದಕ್ಷಿಣ, ದೊಡ್ಡ ಅಥವಾ ಸಣ್ಣ ರಾಜ್ಯಗಳಾವುದೇ ಇರಲಿ ಕ್ಷೇತ್ರ ಪುನರ್ ವಿಂಗಡಣೆಯ ವಿಷಯಕ್ಕೆ ಬಂದಾಗ ರಾಜ್ಯಗಳ ನಡುವೆ ಯಾವುದೇ ತಾರತಮ್ಯ ಉಂಟಾಗುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಗೊಂದಲಗಳಿಗೆ ತೆರೆ ಎಳೆದಿದ್ದಾರೆ.

ಸಂಸತ್ ಅಧಿವೇಶನದಲ್ಲಿ ಗುರುವಾರ ಪಾಲ್ಗೊಂಡು ಮಾತನಾಡಿದ ಪ್ರಧಾನಿ ಮೋದಿ, ಪೂರ್ವದಿಂದ ಪಶ್ಚಿಮಕ್ಕೆ, ಉತ್ತರದಿಂದ ದಕ್ಷಿಣಕ್ಕೆ ಯಾವುದೇ ರಾಜ್ಯಕ್ಕೆ ಯಾವುದೇ ಅನ್ಯಾಯವಾಗುವುದಿಲ್ಲ ಎಂದು ನಾನು ಗ್ಯಾರಂಟಿ ನೀಡುತ್ತೇನೆ” ಎಂದು ಹೇಳಿದರು. ಲೋಕಸಭೆಯಲ್ಲಿ ಪರಿಚಯಿಸಲಾದ ಮೂರು ಮಸೂದೆಗಳ ಕುರಿತು ಚರ್ಚೆ ನಡೆಸಲು ವಿಶೇಷ ಸಂಸತ್ತಿನ ಅಧಿವೇಶನವು ಪ್ರಾರಂಭವಾಯಿತು.

ಈ ಅಧಿವೇಶನವು ಎನ್‌ಡಿಎ ಮತ್ತು ವಿರೋಧ ಪಕ್ಷದ ನಡುವೆ 40 ನಿಮಿಷಗಳ ಕಾಲ ನಡೆದ ಬಿಸಿ ಬಿಸಿ ಚರ್ಚೆಯೊಂದಿಗೆ ಪ್ರಾರಂಭವಾಯಿತು. ನಂತರ ಎನ್‌ಡಿಎ ಮತ್ತು ವಿರೋಧ ಪಕ್ಷದವರು ಸಾಂವಿಧಾನಿಕ (131 ನೇ ತಿದ್ದುಪಡಿ) ಮಸೂದೆಯನ್ನು ಪರಿಚಯಿಸುವ ಮೊದಲು ಮತಗಳ ವಿಭಜನೆಗೆ ಒತ್ತಾಯಿಸಿದರು.

ಕೊನೆಗೆ ಈ ಮಸೂದೆಯನ್ನು 251 ಸದಸ್ಯರು ಬೆಂಬಲಿಸಿದರು ಮತ್ತು 185 ಸಂಸದರು ಅದರ ವಿರುದ್ಧ ಮತ ಚಲಾಯಿಸಿದರು. ದಕ್ಷಿಣ ಭಾರತದ ಮುಖ್ಯಮಂತ್ರಿಗಳಾದ ತಮಿಳುನಾಡಿನ ಎಂ.ಕೆ. ಸ್ಟಾಲಿನ್, ಕೇರಳದ ಪಿಣರಾಯಿ ವಿಜಯನ್, ತೆಲಂಗಾಣದ ರೇವಂತ್ ರೆಡ್ಡಿ ಮತ್ತು ಕರ್ನಾಟಕದ ಸಿದ್ದರಾಮಯ್ಯ ಜನಸಂಖ್ಯಾ ನಿಯಂತ್ರಣ ಕ್ರಮಗಳನ್ನು ಪರಿಣಾಮಕಾರಿಯಾಗಿ ಜಾರಿಗೆ ತಂದ ತಮ್ಮ ರಾಜ್ಯಗಳಿಗೆ ಈ ಸೀಮಾ ನಿರ್ಣಯದಿಂದ ಅನ್ಯಾಯವಾಗುತ್ತದೆ. ಜನಸಂಖ್ಯೆ ಹೆಚ್ಚಿರುವ ಉತ್ತರ ಭಾರತದ ರಾಜ್ಯಗಳಿಗೆ ಇದರಿಂದ ಹೆಚ್ಚು ಅನುಕೂಲವಾಗುತ್ತದೆ ಎಂದು ಅಸಮಾಧಾನ ಹೊರಹಾಕಿದ್ದರು.

ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿದ ಪ್ರಧಾನಿ ಮೋದಿ, ಕ್ಷೇತ್ರ ಪುನರ್ವಿಂಗಡಣೆ ಮಸೂದೆ ಪ್ರಕ್ರಿಯೆಯನ್ನು ವಿರೋಧಿಸುವ ಧ್ವನಿಗಳು ಕೇವಲ ರಾಜಕೀಯ ಲಾಭಕ್ಕಾಗಿ ಹಾಗೆ ಮಾಡುತ್ತಿವೆ. ಇದರಿಂದ ಯಾವ ರಾಜ್ಯಕ್ಕೂ ಯಾವುದೇ ತಾರತಮ್ಯ, ಅನ್ಯಾಯ ಆಗುವುದಿಲ್ಲ ಎಂಬುದು ನನ್ನ ಗ್ಯಾರಂಟಿ ಎಂದು ಹೇಳಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments