Wednesday, 11 November 2026 — Kannadavahini
BREAKING NEWS
ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು
ದೇಶ

ವಿವಾದಿತ ವಕ್ಫ್ ಕಾಯ್ದೆಯ 14 ತಿದ್ದುಪಡಿಗೆ ಕೇಂದ್ರ ಸಂಪುಟ ಅಸ್ತು

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 19 ವೀಕ್ಷಣೆಗಳು
pm-modi
pm-modi

ನವದೆಹಲಿ: ವಿವಾದಿತ ವಕ್ಫ್ (ತಿದ್ದುಪಡಿ) ಮಸೂದೆಗೆ ಜೆಪಿಸಿ ಸೂಚಿಸಿರುವ 14 ತಿದ್ದುಪಡಿಗಳಿಗೆ ಕೇಂದ್ರ ಸಂಪುಟ ಅನುಮೋದನೆ ನೀಡಿದೆ. ಈ ಮೂಲಕ ಬಜೆಟ್ ಅಧಿವೇಶನದ ಉತ್ತರಾರ್ಧದಲ್ಲಿ ಮಸೂದೆಯನ್ನು ಸದನದಲ್ಲಿ ಮಂಡಿಸಿ, ಚರ್ಚಿಸಿ ಅನುಮೋದನೆ ಪಡೆಯಲು ಹಾದಿ ಸುಗಮಗೊಂಡಂತಾಗಿದೆ.

ಜಗದಾಂಬಿಕಾ ಪಾಲ್ ಅಧ್ಯಕ್ಷತೆಯ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ಶಿಫಾರಸ್ಸು ಮಾಡಿರುವ ಬಹುತೇಕ ಎಲ್ಲ ಬದಲಾವಣೆಗಳನ್ನು ಅಳವಡಿಸಿಕೊಳ್ಳಲು ಸರ್ಕಾರ ನಿರ್ಧರಿಸಿದೆ.

ಭಾರತೀಯ ಬಂದರು ಮಸೂದೆಯ ಜೊತೆಗೆ ಕಳೆದ ವಾರ ಈ ಮಸೂದೆಗೂ ಸಂಪುಟ ಒಪ್ಪಿಗೆ ನೀಡಿದೆ ಎಂದು ತಿಳಿದು ಬಂದಿದೆ. ಸರ್ಕಾರ ಈ ಮಸೂದೆಯನ್ನು ಆದ್ಯತೆಯ ಪಟ್ಟಿಯಲ್ಲಿ ಸೇರಿಸಿದೆ.

ಫೆ.13ರಂದು ಸಂಸತ್ತಿನಲ್ಲಿ ಮಂಡಿಸಲಾದ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ವರದಿ ಆಧರಿಸಿ ಫೆ.19ರ ಸಭೆಯಲ್ಲಿ ಸಂಪುಟ ತಿದ್ದುಪಡಿಗಳನ್ನು ಅಂಗೀಕರಿಸಿದ ಬಳಿಕ ಒಪ್ಪಿಗೆ ಸೂಚಿಸಿದೆ ಎಂದು ವರದಿಗಳಿಂದ ತಿಳಿದುಬಂದಿದೆ.

ಸಂಸತ್ತಿನಲ್ಲಿ 2025ರ ಬಜೆಟ್ ಅಧಿವೇಶನದ ಮೊದಲಾರ್ಧದಲ್ಲಿ ಪ್ರತಿಪಕ್ಷಗಳ ಗದ್ದಲದ ನಡುವೆ ವರದಿಯನ್ನು ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಮಂಡಿಸಲಾಯಿತು. ಈ ವೇಳೆ ವಿಕ್ಷಗಳು ಗದ್ದಲದಿಂದಾಗಿ ಸ್ವಲ್ಪ ಸಮಯದ ವರೆಗೆ ಕಲಾಪವನ್ನು ಮುಂದೂಡಲಾಯಿತು. ಅಲ್ಲದೇ, ವಿಪಕ್ಷ ಸಂಸದರು ತಮ್ಮ ಭಿನ್ನಾಭಿಪ್ರಾಯವನ್ನು ಜೆಪಿಸಿ ವರದಿಯಲ್ಲಿ ತಿರುಚಲಾಗಿದೆ ಎಂದು ದೂರಿದರು.

ಕಳೆದ ವಾರವಷ್ಟೇ ಮಸೂದೆಯನ್ನು ಕೇಂದ್ರ ಸರ್ಕಾರ ಅನುಮೋದಿಸಿತ್ತು. ಈ ಮೂಲಕ ಮಾರ್ಚ್ 10ರಂದು ಪ್ರಾರಂಭವಾಗಲಿರುವ ಬಜೆಟ್ ಅಧಿವೇಶನದ ದ್ವಿತೀಯಾರ್ಧದಲ್ಲಿ ವಕ್ಫ್ ಆಸ್ತಿಗಳ ನೋಂದಣಿಯನ್ನು ಸುಗಮಗೊಳಿಸುವ ಗುರಿ ಹೊಂದಿತ್ತು ಎಂದು ಮೂಲಗಳು ತಿಳಿಸಿವೆ.

ಬಿಜೆಪಿ ನಾಯಕ ಜಗದಾಂಬಿಕಾ ಪಾಲ್ ನೇತೃತ್ವದ ಜೆಪಿಸಿ, ಪ್ರತಿಪಕ್ಷಗಳ ಭಿನ್ನಾಭಿಪ್ರಾಯದ ನಡುವೆ ಶಾಸನಕ್ಕೆ ಹಲವು ತಿದ್ದುಪಡಿಗಳನ್ನು ಸೂಚಿಸಿದೆ. ಕಳೆದ ಜನವರಿಯಲ್ಲಿ ಜೆಪಿಸಿ ಸಭೆಯಲ್ಲಿ ವಿಪಕ್ಷ ಸಂಸದರು ಸೇರಿ ಇತರರು 44 ತಿದ್ದುಪಡಿಗಳಿಗೆ ಸೂಚಿಸಿದ್ದರು. ಈ ಪೈಕಿ ಬಿಜೆಪಿ ನೇತೃತ್ವದ ಎನ್‌ಡಿಎ ಸದಸ್ಯರು ಪ್ರಸ್ತಾಪಿಸಿದ 14 ತಿದ್ದುಪಡಿಗಳನ್ನು ಮಾತ್ರವೇ ಜಂಟಿ ಸಂಸದೀಯ ಸಮಿತಿ ಅಂಗೀಕರಿಸಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8409 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment