ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಬೆನ್ನು ನೋವಿನ ಕಾರಣ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
73 ವರ್ಷದ ರಾಜನಾಥ್ ಸಿಂಗ್ ಗುರುವಾರ ಬೆಳಿಗ್ಗೆ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದು, ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ರಾಜನಾಥ್ ಸಿಂಗ್ ಅವರ ಆರೋಗ್ಯ ಸ್ಥಿರವಾಗಿದ್ದು, ವೈದ್ಯಕೀಯ ತಪಾಸಣೆ ಮಾಡಲಾಗುತ್ತಿದ್ದು, ಚಿಕಿತ್ಸೆ ಪ್ರಗತಿಯಲ್ಲಿದೆ ಎಂದು ವೈದ್ಯರು ತಿಳಿಸಿದ್ದಾರೆ.