ಬೆನ್ನು ನೋವಿನ ಕಾರಣ ಆಸ್ಪತ್ರೆಗೆ ದಾಖಲಾಗಿದ್ದ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಶನಿವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಬೆನ್ನು ನೋವಿನ ಕಾರಣ ಎರಡು ದಿನಗಳ ಹಿಂದೆ ರಾಜನಾಥ್ ಸಿಂಗ್ ದೆಹಲಿ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಗುಣಮುಖರಾಗಿರುವ ಅವರು ಶನಿವಾರ ಮಧ್ಯಾಹ್ನ 2 ಗಂಟೆಗೆ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ.
ರಾಜನಾಥ್ ಸಿಂಗ್ ಬೆನ್ನು ನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದು, ಏಮ್ಸ್ ಆಸ್ಪತ್ರೆಯ ಖಾಸಗಿ ವಾರ್ಡ್ ನಲ್ಲಿ ದಾಖಲಿಸಿಕೊಂಡು ನರರೋಗ ತಜ್ಞರು ಚಿಕಿತ್ಸೆ ನೀಡಿದ್ದಾರೆ. ಇದೀಗ ರಾಜನಾಥ್ ಸಿಂಗ್ ಸಂಪೂರ್ಣ ಗುಣಮುಖರಾಗಿದ್ದಾರೆ ಎಂದು ಏಮ್ಸ್ ಆಸ್ಪತ್ರೆ ವೈದ್ಯ ರಿಮಾ ದಾದಾ ತಿಳಿಸಿದ್ದಾರೆ.