ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಮರ್ಮಾಘಾತವಾಗಿದ್ದು, ಸಮಾಜವಾದಿ-ಕಾಂಗ್ರೆಸ್ ಮೈತ್ರಿಕೂಟ ಭಾರೀ ಮುನ್ನಡೆ ಸಾಧಿಸಿದ್ದು, ಭಾರೀ ಗೆಲುವಿನತ್ತ ಮುನ್ನಡೆ ಸಾಧಿಸಿದೆ.
ಉತ್ತರ ಪ್ರದೇಶದ 80 ಲೋಕಸಭಾ ಸ್ಥಾನಗಳ ಪೈಕಿ ಎನ್ ಡಿಎ ಮೈತ್ರಿಕೂಟ 37 ಹಾಗೂ ಸಮಾಜವಾದಿ ಪಕ್ಷ 42 ಮತ್ತು ಇತರರು 1 ಸ್ಥಾನದಲ್ಲಿ ಮುನ್ನಡೆ ಸಾಧಿಸಿದ್ದಾರೆ.
ರಾಹುಲ್ ಗಾಂಧಿ ಬದಲು ಅಮೇಥಿಯಲ್ಲಿ ಕಣಕ್ಕಿಳಿದಿದ್ದ ಕಿಶೋರಿ ಲಾಲ್ ಶರ್ಮ 77 ಸಾವಿರ ಮತಗಳಿಂದ ಬಿಜೆಪಿ ಅಭ್ಯರ್ಥಿ ಸ್ಮೃತಿ ಇರಾನಿ ವಿರುದ್ಧ ಮುನ್ನಡೆ ಸಾಧಿಸಿದ್ದು, ಗೆಲುವಿನತ್ತ ದಾಪುಗಾಲರಿಸಿದ್ದಾರೆ.
ಮತ್ತೊಂದೆಡೆ ಅಮೇಥಿ ತೊರೆದು ಕೇರಳದ ವಯನ್ನಾಡು ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ತಾಯಿ ಸೋನಿಯಾ ಗಾಂಧಿ ತೆರವು ಮಾಡಿದ್ದ ರಾಯ್ ಬರೇಲಿ ಕ್ಷೇತ್ರದಿಂದ ಸ್ಪರ್ಧಿಸಿದ್ದು, ಅಲ್ಲಿ ಭಾರೀ ಮುನ್ನಡೆ ಗಳಿಸಿದ್ದಾರೆ.