Tuesday, May 26, 2026
Google search engine
Homeದೇಶಯುಪಿಎಸ್​ಸಿ ಅಧಿಸೂಚನೆ ಪ್ರಕಟ: 1013 ನಾಗರಿಕ ಸೇವಾ ಹುದ್ದೆಗಳ ಪರೀಕ್ಷೆಗೆ ಅರ್ಜಿ ಆಹ್ವಾನ

ಯುಪಿಎಸ್​ಸಿ ಅಧಿಸೂಚನೆ ಪ್ರಕಟ: 1013 ನಾಗರಿಕ ಸೇವಾ ಹುದ್ದೆಗಳ ಪರೀಕ್ಷೆಗೆ ಅರ್ಜಿ ಆಹ್ವಾನ

ನವದೆಹಲಿ: ದೇಶದ ಅತ್ಯುನ್ನತ ಹುದ್ದೆಗಳಿಗೆ ನಡೆಯುವ ನಾಗರಿಕ ಸೇವಾ ಪರೀಕ್ಷೆಗೆ ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್​ಸಿ) ಅಧಿಸೂಚನೆ ಪ್ರಕಟಿಸಿದೆ.

ಐಎಎಸ್​, ಐಪಿಎಸ್​, ಐಎಫ್​ಎಸ್​ನಂತಹ ದೇಶದ ಅತ್ಯುನ್ನತ ಶ್ರೇಣಿಯ ಹುದ್ದೆಗಳ ನೇಮಕಾತಿ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ.

ಪ್ರಸಕ್ತ ಸಾಲಿನ ಅಂದರೆ 2026ನೇ ಸಾಲಿನ ಗ್ರೂಪ್​ ಎ ಮತ್ತು ಬಿ ಯ ನಾಗರಿಕ ಸೇವಾ ಪರೀಕ್ಷೆ ಮತ್ತು ಭಾರತೀಯ ಅರಣ್ಯ ಸೇವಾ ಪರೀಕ್ಷೆ(ಐಎಫ್‌ಎಸ್‌) ಹುದ್ದೆಗಳಿಗೆ ಅಧಿಸೂಚನೆ ಇದಾಗಿದ್ದು, ಈ ಕುರಿತ ಮಾಹಿತಿ ಇಲ್ಲಿದೆ.

ಹುದ್ದೆಗಳ ವಿವರ:

ಕೇಂದ್ರ ನಾಗರಿಕ ಸೇವಾ ಪರೀಕ್ಷೆ – 933 ಹುದ್ದೆಗಳು

ಭಾರತೀಯ ಅರಣ್ಯ ಸೇವಾ ಪರೀಕ್ಷೆ – 80 ಹುದ್ದೆಗಳು

ವಿದ್ಯಾರ್ಹತೆ: ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿ ಹೊಂದಿರಬೇಕು. ಅರಣ್ಯ ಸೇವೆ ಪರೀಕ್ಷೆ ತೆಗೆದುಕೊಳ್ಳಲು ಬಯಸುವ ಅಭ್ಯರ್ಥಿ ಪಶುಸಂಗೋಪನೆ ಮತ್ತು ಪಶುವೈದ್ಯಕೀಯ ವಿಜ್ಞಾನ, ಸಸ್ಯಶಾಸ್ತ್ರ, ರಸಾಯನಶಾಸ್ತ್ರ, ಭೂವಿಜ್ಞಾನ, ಗಣಿತ, ಭೌತಶಾಸ್ತ್ರ, ಕೃಷಿ ಪದವಿ, ಅರಣ್ಯಶಾಸ್ತ್ರ ಪದವಿಯಲ್ಲಿ ಒಂದು ವಿಷಯವಾಗಿ ಅಭ್ಯಾಸ ಮಾಡಿರಬೇಕು.

ವಯೋಮಿತಿ: ಕನಿಷ್ಠ 21 ವರ್ಷ, ಗರಿಷ್ಠ 32 ವರ್ಷ ವಯೋಮಿತಿ ಮೀರಿರಬಾರದು. ಪರಿಶಿಷ್ಟ ಜಾತಿ, ಪರಿಶಿಷ್ಟ ಸಮುದಾಯದ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ವಿಕಲಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಇದೆ.

ಅರ್ಜಿ ಸಲ್ಲಿಕೆ, ಶುಲ್ಕ: ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬೇಕಿದೆ. ಮಹಿಳಾ, ಪ.ಜಾ, ಪ.ಪಂ ಮತ್ತು ವಿಕಲಚೇತನ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ವಿನಾಯಿತಿ ಇದೆ. ಇತರ ಅಭ್ಯರ್ಥಿಗಳಿಗೆ 100 ರೂ ಅರ್ಜಿ ಶುಲ್ಕ ನಿಗದಿ ಪಡಿಸಲಾಗಿದೆ.

ಆಯ್ಕೆ: ಪ್ರಾಥಮಿಕ, ಮುಖ್ಯ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ.

ಫೆಬ್ರವರಿ 4ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಫೆಬ್ರವರಿ 24 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಈ ಹುದ್ದೆಗೆ ಮೇ 24 ರಂದು ಪರೀಕ್ಷೆ ನಡೆಯಲಿದೆ. ಹೆಚ್ಚಿನ ಮಾಹಿತಿಗೆ upsc.gov.inಗೆ ಭೇಟಿ ನೀಡಬಹುದು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments