Friday, 13 November 2026 — Kannadavahini
BREAKING NEWS
ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ
ಕ್ರೀಡೆ

ವೈಭವ್ 84 ಎಸೆತದಲ್ಲಿ 190 ರನ್: 574 ರನ್ ಪೇರಿಸಿ ಬಿಹಾರ ವಿಶ್ವದಾಖಲೆ!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 16 ವೀಕ್ಷಣೆಗಳು
Vaibhav Suryavanshi

ಸಿಡಿಲಬ್ಬರದ ಬ್ಯಾಟಿಂಗ್ ನಿಂದ ಗಮನ ಸೆಳೆಯುತ್ತಿರುವ ವೈಭವ್ ಸೂರ್ಯವಂಶಿ 84 ಎಸೆತಗಳಲ್ಲಿ ಸಿಡಿಸಿದ 190 ರನ್ ನೆರವಿನಿಂದ ವಿಜಯ್ ಹಜಾರೆ ಕ್ರಿಕೆಟ್ ಟೂರ್ನಿಯಲ್ಲಿ ಬಿಹಾರ 574 ರನ್ ಪೇರಿಸಿ ವಿಶ್ವದಾಖಲೆ ಬರೆದಿದೆ.

ರಾಂಚಿಯಲ್ಲಿ ಬುಧವಾರ ನಡೆದ ಅರುಣಾಚಲ ಪ್ರದೇಶ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಲು ನಿರ್ಧರಿಸಿದ ಬಿಹಾರ ತಂಡ ಮೂವರು ಬ್ಯಾಟ್ಸ್ ಮನ್ ಗಳ ಶತಕದ ನೆರವಿನಿಂದ 50 ಓವರ್ ಗಳಲ್ಲಿ 6 ವಿಕೆಟ್ ಕಳೆದುಕೊಂಡು 547 ರನ್ ಪೇರಿಸಿತು.

ಏಕದಿನ ಇತಿಹಾಸದಲ್ಲೇ ಯಾವುದೇ ದೇಶೀಯ ಕ್ರಿಕೆಟ್ ನಲ್ಲಿ ತಂಡವೊಂದು ದಾಖಲಿಸಿದ ಗರಿಷ್ಠ ಮೊತ್ತ ಇದಾಗಿದೆ. 2022ರಲ್ಲಿ ಇದೇ ಅರುಣಾಚಲ ಪ್ರದೇಶ ವಿರುದ್ಧ ತಮಿಳುನಾಡು 2 ವಿಕೆಟ್ ಗೆ 506 ರನ್ ಗಳಿಸಿದ್ದು ಇದುವರೆಗಿನ ಗರಿಷ್ಠ ರನ್ ವಿಶ್ವದಾಖಲೆಯಾಗಿತ್ತು.

ಭರ್ಜರಿ ಫಾರ್ಮ್ ನಲ್ಲಿರುವ ವೈಭವ್ ಸೂರ್ಯವಂಶಿ 84 ಎಸೆತಗಳಲ್ಲಿ 16 ಬೌಂಡರಿ ಮತ್ತು 15 ಸಿಕ್ಸರ್ ನೆರವಿನಿಂದ 190 ರನ್ ಬಾರಿಸಿದ್ದಾಗ ಔಟಾಗಿ ದ್ವಿಶತಕ ತಪ್ಪಿಸಿಕೊಂಡರು. ವೈಭವ್ ಆರ್ಭಟ ಎಷ್ಟು ಜೋರಾಗಿತ್ತೆಂದರೆ ಮೊದಲ ವಿಕೆಟ್ ಗೆ 14.3 ಓವರ್ ಗಳಲ್ಲಿ 158 ರನ್ ಜೊತೆಯಾಟ ನಿಭಾಯಿಸಿದರು. ಇದರಲ್ಲಿ ಮತ್ತೊಂದು ತುದಿಯಲ್ಲಿದ್ದ ಮಂಗಲ್ ಮಹ್ರರೋರ್ ಕಾಣಿಕೆ ಕೇವಲ 33 ಆಗಿತ್ತು.

ವೈಭವ್ ಸೂರ್ಯವಂಶಿ 36 ಎಸೆತಗಳಲ್ಲಿ ಶತಕ ಸಿಡಿಸಿ ಅತ್ಯಂತ ವೇಗವಾಗಿ ಶತಕ ಸಿಡಿಸಿದ ಅತ್ಯಂತ ಕಿರಿಯ ಆಟಗಾರ (14 ವರ್ಷ 292 ದಿನ) ಎಂಬ ದಾಖಲೆ ಬರೆದಿದ್ದಾರೆ. 10 ಬೌಂಡರಿ ಮತ್ತು 6 ಸಿಕ್ಸರ್ ನೆರವಿನಿಂದ ಶತಕ ಪೂರೈಸಿದರು. ಈ ಮೂಲಕ ದೇಶೀಯ ಕ್ರಿಕೆಟ್ ನಲ್ಲಿ ಅತ್ಯಂತ ವೇಗವಾಗಿ ಶತಕ ಪೂರೈಸಿದ ಎರಡನೇ ಆಟಗಾರ ಎನಿಸಿಕೊಂಡರು.  ಜಾಕ್ ಫ್ರೇಜರ್ 2023ರಲ್ಲಿ 29 ಎಸೆತಗಳಲ್ಲಿ ಶತಕ ಪೂರೈಸಿದ್ದು ಇದುವರೆಗಿನ ದಾಖಲೆಯಾಗಿದೆ.

ನಂತರ ಪಿಯೂಶ್ ಸಿಂಗ್ (77), ಆಯುಷ್ ಲೋಹಾರುಕಾ 56 ಎಸೆತಗಳಲ್ಲಿ 11 ಬೌಂಡರಿ ಮತ್ತು 8 ಸಿಕ್ಸರ್ ಒಳಗೊಂಡ 116 ರನ್ ಪೇರಿಸಿದರೆ, ನಾಯಕ ಸಕಿಬುಲ್ ಗನಿ 40 ಎಸೆತಗಳಲ್ಲಿ 10 ಬೌಂಡರಿ ಮತ್ತು 12 ಸಿಕ್ಸರ್ ಸಹಾಯದಿಂದ 128 ರನ್ ಸಿಡಿಸಿದರು. ಅರುಣಾಚಲ ಪ್ರದೇಶ ಪರ ಮೋಹಿತ್ ಮತ್ತು ಟೆಚಿ ನೆರಿ ತಲಾ 2 ವಿಕೆಟ್ ಗಳಿಸಿದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8411 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment