ವಿಕ್ರಂಗೌಡ ಹಲವು ನಕ್ಸಲ್ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾದವನಾಗಿದ್ದು, ನಕ್ಸಲ್ ಚಟುವಟಿಕೆಯನ್ನು ನಿಗ್ರಹಿಸಲು ಆತನನ್ನು ಎನ್ ಕೌಂಟರ್ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಬೆಂಗಳೂರಿನಲ್ಲಿ ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿಕ್ರಂಗೌಡ ಅವರಿಗೆ ಶರಣಾಗುವಂತೆ ಆದೇಶ ನೀಡಲಾಗಿತ್ತು. ಆದರೆ ಅವರು ಶರಣಾಗಿರಲಿಲ್ಲ. ವಿಕ್ರಂಗೌಡ ಅವರನ್ನು ಹಿಡಿದವರಿಗೆ ಕೇರಳ ಸರ್ಕಾರ 25 ಲಕ್ಷ ಹಾಗೂ ಕರ್ನಾಟಕ ಸರ್ಕಾರ 5 ಲಕ್ಷ ಬಹುಮಾನ ಘೋಷಿಸಿತ್ತು ಎಂದು ವಿವರಿಸಿದರು.
ನಾಳೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಲು ಸಮಯ ಕೋರಲಾಗಿದೆ. ರಾಜ್ಯಕ್ಕೆ ನಬಾರ್ಡ್ ನಿಂದ ರಾಜ್ಯಕ್ಕೆ ನೀಡಲಾಗುವ ಸಾಲದ ಮೊತ್ತವನ್ನು ಕಳೆದ ವರ್ಷದ 5600 ಕೋಟಿ ರೂ.ಗಳಿಂದ , ಈ ವರ್ಷ 2340 ಕೋಟಿ ರೂ. ಗಳಿಗೆ ಇಳಿಸಲಾಗಿದೆ. ಆದ್ದರಿಂದ ಕೇಂದ್ರ ವಿತ್ತ ಸಚಿವರನ್ನು ಭೇಟಿಯಾಗಿ ಈ ಬಗ್ಗೆ ಮನವಿ ಮಾಡಿಕೊಳ್ಳಲಾಗುವುದು. ಈ ಮಧ್ಯೆ ಸಮಯಾವಕಾಶವಿದ್ದಲ್ಲಿ ಪಕ್ಷದ ವರಿಷ್ಠರನ್ನು ಭೇಟಿ ಮಾಡಲಾಗುವುದು ಎಂದು ಅವರು ಹೇಳಿದರು.