ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಮೊದಲ ಹಂತದ 14 ಕ್ಷೇತ್ರಗಳಿಗೆ ಮತದಾನ ಮುಗಿದ ಬೆನ್ನಲ್ಲೇ ಕರ್ನಾಟಕಕ್ಕೆ ಕೇಂದ್ರ ಸರ್ಕಾರ 3454 ಕೋಟಿ ರೂ.ಬರ ಪರಿಹಾರ ಮೊತ್ತವನ್ನು ಬಿಡುಗಡೆ ಮಾಡಿದೆ.
ಲೋಕಸಭಾ ಚುನಾವಣೆಯಲ್ಲಿ ರಾಜ್ಯ ಕಾಂಗ್ರೆಸ್ ನಾಯಕರು ಕೇಂದ್ರ ಸರ್ಕಾರದಿಂದ ಬರ ಪರಿಹಾರ ಬಿಡುಗಡೆ ಮಾಡಿಲ್ಲ ಎಂದು ರಾಜ್ಯ ಸರ್ಕಾರ ಆರೋಪಿಸಿತ್ತು. ಈ ಸಬಂಬಂಧ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು. 18,000 ಕೋಟಿ ನೀಡಬೇಕು. ನೀಡಿಲ್ಲ ಎಂಬುದಾಗಿ ಗುಡುಗಿದ್ದರು. ಈ ಬೆನ್ನಲ್ಲೇ ಕೊನೆಗೂ ಕೇಂದ್ರದಿಂದ ಕರ್ನಾಟಕ್ಕೆ 3,454 ಕೋಟಿ ಬರ ಪರಿಹಾರವನ್ನು ರಿಲೀಸ್ ಮಾಡಲಾಗಿದೆ.
ಹೌದು, ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಬರ ಬರಿಹಾರವನ್ನು ಲೋಕಸಭಾ ಚುನಾವಣೆಯ ಹೊತ್ತಿನಲ್ಲೇ ಬಿಡುಗಡೆ ಮಾಡಲಾಗಿದೆ. ಕೇಂದ್ರ ಸರ್ಕಾರದಿಂದ 3,454 ಕೋಟಿಯನ್ನು ಬರ ಪರಿಹಾರವಾಗಿ ಬಿಡುಗಡೆ ಮಾಡಿದೆ. ಆದ್ರೇ ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ಬರ ಪರಿಹಾರವಾಗಿ ರೂ.18,174 ಕೋಟಿ ಬರಬೇಕಿದೆ ಎಂಬುದಾಗಿ ಆರೋಪಿಸಲಾಗಿದೆ. ಈ ಬರ ಪರಿಹಾರವನ್ನು ಬಿಡುಗಡೆ ಮಾಡುವಂತೆಯೂ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿತ್ತು.
ಅಂತಿಮವಾಗಿ ರಾಜ್ಯ ಕಾಂಗ್ರೆಸ್ ಸರ್ಕಾರ ಕೇಂದ್ರಕ್ಕೆ ಬರ ಪರಿಹಾರ ಕೋರಿ ಸಲ್ಲಿಸಲಾಗಿದ್ದಂತ ರೂ.18,174 ಕೋಟಿ ಬದಲಾಗಿದೆ. ಬರ ಪರಿಹಾರ ತಂಡದ ವರದಿಯಂತೆ ಸದ್ಯಕ್ಕೆ ರೂ.3,454 ಕೋಟಿ ಹಣವನ್ನು ಬಿಡುಗಡೆ ಮಾಡಲಾಗಿದೆ. ಈ ಮೂಲಕ ಲೋಕಸಭಾ ಚುನಾವಣೆಯ 2ನೇ ಹಂತದ ಮತದಾನಕ್ಕೂ ಮುನ್ನವೇ ಕಾಂಗ್ರೆಸ್ ನಾಯಕರ ಬಾಯಿ ಮುಚ್ಚಿಸೋ ಕೆಲಸವನ್ನು ಮಾಡಿದೆ.