ಚೆನ್ನೈ: ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ವಿಜಯ್ ತಾವು ಗೆದ್ದಿರುವ ಎರಡು ಕ್ಷೇತ್ರಗಳ ಪೈಕಿ ತಿರುಚ್ಚಿ ಪೂರ್ವ ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ವಿಜಯ್ ಅವರು ಪೆರಂಬೂರು ಮತ್ತು ತಿರುಚ್ಚಿ ಪೂರ್ವ ಕ್ಷೇತ್ರದಿಂದ ಕಣಕ್ಕಿಳಿದು ಜಯಭೇರಿ ಬಾರಿಸಿದ್ದರು. ಅಂತೆಯೇ ಇದೀಗ ಸಿಎಂ ಆಗಿ ಪದಗ್ರಹಣ ಮಾಡಿದ ಬೆನ್ನಲ್ಲೇ ಪೆರಂಬೂರು ಸ್ಥಾನವನ್ನು ಉಳಿಸಿಕೊಂಡು, ತಿರುಚ್ಚಿ ಪೂರ್ವಕ್ಕೆ ವಿಜಯ್ ರಾಜೀನಾಮೆ ಸಲ್ಲಿಸಿದ್ದಾರೆ.
ಸಚಿವರಾದ ಸೆಂಗೊಟ್ಟೈಯನ್ ಮತ್ತು ವೆಂಕಟರಮಣನ್, ವಿಜಯ್ ರಾಜೀನಾಮೆ ಪತ್ರವನ್ನು ವಿಧಾನಸಭಾ ಕಾರ್ಯದರ್ಶಿ ಶ್ರೀನಿವಾಸನ್ ಅವರಿಗೆ ನೀಡಿದ್ದಾರೆ. ಈ ಹಿನ್ನೆಲೆ ತಿರುಚ್ಚಿ ಪೂರ್ವ ವಿಧಾನಸಭಾ ಕ್ಷೇತ್ರ ತೆರವಾಗಿದ್ದು, ಮುಂದಿನ ಆರು ತಿಂಗಳಲ್ಲಿ ಉಪ ಚುನಾವಣೆ ನಡೆಯಲಿದೆ.



