Wednesday, July 1, 2026
Google search engine
Homeಕ್ರೀಡೆಗುಣಮುಖರಾದ ವಿನೋದ್ ಕಾಂಬ್ಳಿ ಆಸ್ಪತ್ರೆಯಿಂದ ಬಿಡುಗಡೆ

ಗುಣಮುಖರಾದ ವಿನೋದ್ ಕಾಂಬ್ಳಿ ಆಸ್ಪತ್ರೆಯಿಂದ ಬಿಡುಗಡೆ

ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಯಶಸ್ವಿ ಶಸ್ತ್ರಚಿಕಿತ್ಸೆ ನಂತರ ಸಂಪೂರ್ಣ ಚೇತರಿಸಿಕೊಂಡಿದ್ದು, ಥಾಣೆಯ ಖಾಸಗಿ ಆಸ್ಪತ್ರೆಯಿಂದ ಮಂಗಳವಾರ ಬಿಡುಗಡೆ ಆಗಿದ್ದಾರೆ.

ಥಾಣೆಯ ಭಿವಾಂಡಿ ಜಿಲ್ಲೆಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ 52 ವರ್ಷದ ವಿನೋದ್ ಕಾಂಬ್ಳಿ ಮಂಗಳವಾರ ಸಂಜೆ 4 ಗಂಟೆಗೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಮೂತ್ರಕೋಶದ ಸೋಂಕು ಹಾಗೂ ಸ್ನಾಯು ಸೆಳೆತದಿಂದ ಬಳಲುತ್ತಿದ್ದ ವಿನೋದ್ ಕಾಂಬ್ಳಿ ಅವರನ್ನು ಡಿಸೆಂಬರ್ 21ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯಕೀಯ ತಪಾಸಣೆ ವೇಳೆ ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿರುವುದು ಕಂಡು ಬಂದಿತ್ತು.

ಮದ್ಯ ವ್ಯಸನ ಹಾಗೂ ಧೂಮಪಾನ ಚಟದಿಂದ ಈ ಸಮಸ್ಯೆ ಉಂಟಾಗಿದ್ದು ಎಂದು ಹೇಳಲಾಗಿದ್ದು, ಶಸ್ತ್ರಚಿಕಿತ್ಸೆ ನಂತರ ವಿನೋದ್ ಕಾಂಬ್ಳಿ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದು, ಇತ್ತೀಚೆಗೆ ಅವರು ನರ್ಸ್ ಜೊತೆ ಡ್ಯಾನ್ಸ್ ಮಾಡಿ ಸಂತಸ ವ್ಯಕ್ತಪಡಿಸಿದ ವೀಡಿಯೊ ವೈರಲ್ ಆಗಿತ್ತು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments