Monday, May 18, 2026
Google search engine
Homeಕ್ರೀಡೆ500 ರನ್ ಪೂರೈಸಿ ಐಪಿಎಲ್ ನಲ್ಲಿ ದಾಖಲೆ ಬರೆದ ವಿರಾಟ್ ಕೊಹ್ಲಿ!

500 ರನ್ ಪೂರೈಸಿ ಐಪಿಎಲ್ ನಲ್ಲಿ ದಾಖಲೆ ಬರೆದ ವಿರಾಟ್ ಕೊಹ್ಲಿ!

ಚೇಸಿಂಗ್ ಮಾಸ್ಟರ್, ಕಿಂಗ್ ಕೊಹ್ಲಿ ರನ್ ಹೊಳೆ ಹರಿಸುವ ಮೂಲಕ ಐಪಿಎಲ್ ನಲ್ಲಿ ಯಾರೂ ಮಾಡದ ದಾಖಲೆ ಬರೆದಿದ್ದಾರೆ.

ಭಾನುವಾರ ಧರ್ಮಶಾಲಾದಲ್ಲಿ ನಡೆದ ಪಂಜಾಬ್ ಕಿಂಗ್ಸ್ ವಿರುದ್ಧದ ಐಪಿಎಲ್ ಪಂದ್ಯದಲ್ಲಿ ಅರ್ಧಶತಕ ಬಾರಿಸಿದ ವಿರಾಟ್ ಕೊಹ್ಲಿ ಟೂರ್ನಿಯಲ್ಲಿ 500 ರನ್ ಪೂರೈಸಿದರು.

ಕೊಹ್ಲಿಗೆ ಇದು 67ನೇ ಅರ್ಧಶತಕವಾಗಿದೆ. ಅಲ್ಲದೇ 9ನೇ ಬಾರಿ ಐಪಿಎಲ್ ನಲ್ಲಿ 500 ರನ್ ಪೂರೈಸಿದ ದಾಖಲೆ ಬರೆದಿದ್ದಾರೆ. ಈ ಮೂಲಕ ಅತ್ಯಂತ ದೀರ್ಘಕಾಲ ಭರ್ಜರಿ ಫಾರ್ಮ್ ಪ್ರದರ್ಶಿಸಿದ ಆಟಗಾರ ಎನಿಸಿಕೊಂಡಿದ್ದಾರೆ.

ಐಪಿಎಲ್ ನಲ್ಲಿ ಅತೀ ಹೆಚ್ಚು ಬಾರಿ (9) 500ಕ್ಕಿಂತ ಅಧಿಕ ರನ್ ಗಳಿಸಿದ ಮೊದಲ ಆಟಗಾರ ಎಂಬ ಗೌರವಕ್ಕೆ ಕೊಹ್ಲಿ ಪಾತ್ರರಾಗಿದ್ದಾರೆ. ಕರ್ನಾಟಕದ ಕೆಎಲ್ ರಾಹುಲ್ ಹಾಗೂ ಡೇವಿಡ್ ವಾರ್ನರ್ ತಲಾ 7 ಬಾರಿ ಈ ಸಾಧನೆ ಮಾಡಿ ಎರಡನೇ ಸ್ಥಾನದಲ್ಲಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments