ವಕ್ಫ್ ತಿದ್ದುಪಡಿ ಮಸೂದೆ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಹಲವಾರು ಅರ್ಜಿಗಳ ವಿಚಾರಣೆಯನ್ನು ಪೂರ್ಣಗೊಳಿಸಿದ ಸುಪ್ರೀಂಕೋರ್ಟ್ ವಿಚಾರಣೆಯನ್ನು ಕಾಯ್ದಿರಿಸಿದೆ.
ವಕ್ಫ್ ಮಂಡಳಿಗೆ ನೀಡಲಾದ ದಾನ ಧರ್ಮದ ಆಧರಿತವೋ ಅಥವಾ ಜನಾಂಗದ ಅಭಿವೃದ್ಧಿಗೋ ಎಂಬ ಜಿಜ್ಞಾಸೆ ಕುರಿತು ಮುಖ್ಯ ನ್ಯಾಯಮೂರ್ತಿ ಬಿಆರ್ ಗವಾಯಿ ನೇತೃತ್ವದ ಪೀಠ ವಿಚಾರಣೆಯನ್ನು ಮುಗಿಸಿದೆ. ತೀರ್ಪು ಕಾಯ್ದಿರಿಸಿದ್ದರೂ ದಿನಾಂಕ ಪ್ರಕಟಿಸಿಲ್ಲ.
ವಕ್ಫ್ ತಿದ್ದುಪಡಿ ಕಾಯ್ದೆಯಿಂದ ಮುಸ್ಲಿಮ್ ಸಮುದಾಯದ ಮೂಲಭೂತ ಹಕ್ಕುಗಳ ಉಲ್ಲಂಘನೆ ಆಗಿದೆ. ವಕ್ಫ್ ಎಂಬುದು ಇಸ್ಲಾಮಿಕ್ ಆಧರಿತ ಕಲ್ಪನೆಯ ಸಂಘಟನೆಯಾಗಿದೆ. ಇದನ್ನು ಧಾರ್ಮಿಕ ಕೇಂದ್ರವಾಗಿ ಸೀಮಿತಗೊಳಿಸಬಾರದು ಎಂದು ಅರ್ಜಿದಾರರು ವಾದ ಮಂಡಿಸಿದ್ದರು.
ಚಾರಿಟಿ ಎಂಬುದು ಸಮಾಜ ಸೇವೆಗಾಗಿ ರಚಿಸಲಾಗುತ್ತದೆ. ಇದರಲ್ಲಿ ಯಾವುದೇ ಧರ್ಮ ಅಥವಾ ಜನಾಂಗ ಎಂಬುದು ಇರುವುದಿಲ್ಲ. ಎಲ್ಲರೂ ಸ್ವರ್ಗಕ್ಕೆ ಹೋಗುವ ಉದ್ದೇಶವನ್ನೇ ಹೊಂದಿರುತ್ತಾರೆ ಎಂದು ಮುಖ್ಯ ನ್ಯಾಯಮೂರ್ತಿ ಬಿಆರ್ ಗವಾಯಿ ವಿಚಾರಣೆ ಸಂದರ್ಭದಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದರು.



