Thursday, May 14, 2026
Google search engine
Homeಕಾನೂನುಮತದಾರರಿಗೆ ಆಮೀಷ: ಶಾಸಕ ಬಾಲಕೃಷ್ಣ ವಿರುದ್ಧ ವಾರೆಂಟ್ ಜಾರಿ

ಮತದಾರರಿಗೆ ಆಮೀಷ: ಶಾಸಕ ಬಾಲಕೃಷ್ಣ ವಿರುದ್ಧ ವಾರೆಂಟ್ ಜಾರಿ

ಬೆಂಗಳೂರು: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದ ವಿಚಾರಣೆಗೆ ಗೈರು ಹಾಜರಾದ ಮಾಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಹೆಚ್.ಸಿ. ಬಾಲಕೃಷ್ಣ ಅವರಿಗೆ ನ್ಯಾಯಾಲಯ ಜಾಮೀನು ರಹಿತ ಬಂಧನ ವಾರೆಂಟ್ ಜಾರಿ ಮಾಡಿದೆ.

2018ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಹೆಚ್.ಸಿ. ಬಾಲಕೃಷ್ಣ ಮತದಾರರಿಗೆ ಆಮಿಷ ಒಡ್ಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಸಂಬಂಧ ಅವರ ವಿರುದ್ಧ ಅಬಕಾರಿ ಕಾಯ್ದೆ ಹಾಗೂ ಐಪಿಸಿಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಅಂದಿನಿಂದ ಈ ಪ್ರಕರಣದ ವಿಚಾರಣೆ ನಡೆಯುತ್ತಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿತ್ತು. ಆದರೆ, ಶಾಸಕರು ಸತತವಾಗಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ಗೈರುಳಿದಿದ್ದರು.

ನ್ಯಾಯಾಲಯದ ಸಮನ್ಸ್‌ಗೆ ಸರಿಯಾಗಿ ಸ್ಪಂದಿಸದ ಹಿನ್ನೆಲೆಯಲ್ಲಿ ಗಂಭೀರವಾಗಿ ಪರಿಗಣಿಸಿದ ನ್ಯಾಯಾಧೀಶರು, ಈಗ ಶಾಸಕರ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್ ಹೊರಡಿಸಿದ್ದಾರೆ.

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಂತಹ ಗಂಭೀರ ಪ್ರಕರಣಗಳಲ್ಲಿ ಜನಪ್ರತಿನಿಧಿಗಳು ನ್ಯಾಯಾಲಯಕ್ಕೆ ಹಾಜರಾಗದಿದ್ದಾಗ ಕಾನೂನು ಪ್ರಕ್ರಿಯೆ ಬಿಗಿಗೊಳಿಸಿರುವುದಕ್ಕೆ ಈ ವಾರೆಂಟ್ ಸಾಕ್ಷಿಯಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments