ಇದೇ ಮೊದಲ ಬಾರಿ ಚುನಾವಣಾ ಅಖಾಡಕ್ಕಿಳಿದಿರುವ ಪ್ರಿಯಾಂಕಾ ಗಾಂಧಿ ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ 2 ಲಕ್ಷಕ್ಕೂ ಅಧಿಕ ಮತಗಳಿಂದ ಭಾರೀ ಮುನ್ನಡೆ ಸಾಧಿಸಿದ್ದಾರೆ.
ಸೋದರ ರಾಹುಲ್ ಗಾಂಧಿ ಬಿಟ್ಟುಕೊಟ್ಟಿದ್ದ ವಯನಾಡು ಕ್ಷೇತ್ರದಲ್ಲಿ ಸ್ಪರ್ಧಿಸುವ ಮೂಲಕ ಸಕ್ರಿಯ ರಾಜಕಾರಣಕ್ಕೆ ಧುಮುಕಿದ ಪ್ರಿಯಾಂಕಾ ಗಾಂಧಿ ವಯನಾಡು ಕ್ಷೇತ್ರದಲ್ಲಿ
2,93,435 ಮತಗಳನ್ನು ಪಡೆಯುವ ಮೂಲಕ ಪ್ರತಿಸ್ಪರ್ಧಿಗಳಿಗಿಂತ ಸುಮಾರು 2 ಲಕ್ಷ ಮತಗಳ ಅಂತರದಿಂದ ಮುನ್ನಡೆ ಸಾಧಿಸುವ ಮೂಲಕ ಜಯಭೇರಿಯತ್ತ ಮುನ್ನುಗ್ಗಿದ್ದಾರೆ.
ವಯನಾಡು ಕ್ಷೇತ್ರದಲ್ಲಿ ಪ್ರಿಯಾಂಕಾ ಗಾಂಧಿ ಅಲ್ಲದೇ ೧೬ ಸ್ಪರ್ಧಿಗಳು ಕಣಕ್ಕಿಳಿದಿದ್ದು, ಸಿಪಿಐ ಹಿರಿಯ ನಾಯಕ ಸತ್ಯನ್ ಮೊರ್ಕಿ ಗರಿಷ್ಠ 65 ಸಾವಿರ ಮತಗಳನ್ನು ಪಡೆದಿದ್ದರೆ, ಬಿಜೆಪಿಯ ನವ್ಯಾ ಹರಿದಾಸ್ 35 ಸಾವಿರ ಮತಗಳನ್ನು ಪಡೆದಿದ್ದು, ಠೇವಣಿ ಕಳೆದುಕೊಳ್ಳುವ ಭೀತಿಗೆ ಸಿಲುಕಿದ್ದಾರೆ.