Wednesday, 11 November 2026 — Kannadavahini
BREAKING NEWS
ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು
ರಾಜ್ಯ

ಅನ್ನಭಾಗ್ಯ ಯೋಜನೆಯಡಿ 10 ಕೆಜಿ ಅಕ್ಕಿ ನೀಡುತ್ತೇವೆ: ಸಚಿವ ಕೆಎಚ್ ಮುನಿಯಪ್ಪ ಘೋಷಣೆ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 23 ವೀಕ್ಷಣೆಗಳು
kh muniyappa
kh muniyappa

ಅನ್ನಭಾಗ್ಯ ಯೋಜನೆಯಡಿ ರಾಜ್ಯ ಸರ್ಕಾರ ಹಣದ ಬದಲು ಪೂರ್ಣ 10 ಕೆಜಿ ಅಕ್ಕಿಯನ್ನು ನೀಡುವುದಾಗಿ ಆಹಾರ ಸಚಿವ ಕೆಎಚ್ ಮುನಿಯಪ್ಪ ಘೋಷಿಸಿದ್ದಾರೆ.

ಬೆಂಗಳೂರಿನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ಪ್ರಕಟಿಸಲಿ ಅವರು, ಫೆಬ್ರವರಿ ತಿಂಗಳಿನಿಂದಲೇ 5 ಕೆಜಿ ಅಕ್ಕಿ ಬದಲು ಪೂರ್ಣ 10 ಕೆಜಿ ಅಕ್ಕಿ ಪಡಿತರದಲ್ಲಿ ನೀಡಲಗುವುದು ಎಂದರು.

ಕೇಂದ್ರ ಸರ್ಕಾರ ಅಕ್ಕಿ ಕೊಡಲು ಒಪ್ಪಿಗೆ ಸೂಚಿಸಿದೆ. ಈ ಹಿasನ್ನೆಲೆಯಲ್ಲಿ ಫೆಬ್ರವರಿ ತಿಂಗಳಿನಿಂದಲೇ ಪ್ರತಿ ತಿಂಗಳು ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದಂತೆ ಪೂರ್ಣ 10 ಕೆಜಿ ಅಕ್ಕಿ ನೀಡಲು ನಿರ್ಧರಿಸಲಾಗಿದೆ ಎಂದು ಅವರು ಹೇಳಿದರು.

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಾಗಿನಿಂದ ಕೇಂದ್ರ ಸರ್ಕಾರ ಹೆಚ್ಚುವರಿ ಅಕ್ಕಿ ನೀಡಲು ನಿರಾಕರಿಸಿದ್ದರಿಂದ ಅನ್ನಭಾಗ್ಯ ಯೋಜನೆಯಡಿ 10 ಕೆಜಿ ಅಕ್ಕಿ ಬದಲು 5 ಕೆಜಿ ಅಕ್ಕಿ ಹಾಗೂ ಕೆಜಿಗೆ 34 ರೂ.ನಂತೆ 5 ಕೆಜಿಗೆ 170 ರೂ. ನೀಡಲಾಗುತ್ತಿತ್ತು ಎಂದು ಅವರು ವಿವರಿಸಿದರು.

ಇದೀಗ ಕೇಂದ್ರ ಸರ್ಕಾರ ಅಕ್ಕಿ ಕೊಡಲು ನಿರ್ಧರಿಸಿದ್ದರು. ಕೆಜಿಗೆ 22 ರೂ.ನಂತೆ ರಾಜ್ಯಕ್ಕೆ ಅಕ್ಕಿ ದೊರೆಯಲಿದೆ. ಸಾಗಾಟ ವೆಚ್ಚ ಸೇರಿ ರಾಜ್ಯಕ್ಕೆ ಕೆಜಿಗೆ 25 ರೂ. ವೆಚ್ಚವಾಗಲಿದೆ. ಇದರಿಂದ ಸುಮಾರು ೯ ರೂ. ಉಳಿತಾಯವಾಗಲಿದೆ ಎಂದು ಇಲಾಖೆಯ ಮೂಲಗಳು ತಿಳಿಸಿವೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8409 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment