Sunday, October 4, 2026
Google search engine
Homeದೇಶರಾಜಕೀಯಕ್ಕೆ ಬಂದು ತಪ್ಪು ಮಾಡಿದೆ: ಪಶ್ಚಿಮ ಬಂಗಾಳದ ಉಪ ಸಭಾಪತಿ ಅಸೀಶ್‌ ಬ್ಯಾನರ್ಜಿ ಆತ್ಮಹತ್ಯೆ

ರಾಜಕೀಯಕ್ಕೆ ಬಂದು ತಪ್ಪು ಮಾಡಿದೆ: ಪಶ್ಚಿಮ ಬಂಗಾಳದ ಉಪ ಸಭಾಪತಿ ಅಸೀಶ್‌ ಬ್ಯಾನರ್ಜಿ ಆತ್ಮಹತ್ಯೆ

ಕೊಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಉಪ ಸಭಾಪತಿ ಹಾಗೂ ತೃಣಮೂಲ ಕಾಂಗ್ರೆಸ್ ಪಕ್ಷದ ಮಾಜಿ ಶಾಸಕರಾಗಿದ್ದ ಅಸೀಶ್ ಬ್ಯಾನರ್ಜಿ ಪಕ್ಷದ ಕಚೇರಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ಅಸೀಶ್ ಬ್ಯಾನರ್ಜಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಅತ್ಯಂತ ನಿಕಟವರ್ತಿ ಹಾಗೂ ಆಪ್ತರಾಗಿದ್ದರು. ಸುದೀರ್ಘ ಕಾಲದಿಂದ ತೃಣಮೂಲ ಕಾಂಗ್ರೆಸ್‌ನಲ್ಲಿ ಸಕ್ರಿಯರಾಗಿದ್ದ ಅವರು, ಪಕ್ಷದ ಸಂಘಟನೆ ಹಾಗೂ ಪಶ್ಚಿಮ ಬಂಗಾಳ ವಿಧಾನಸಭಾ ಕಾರ್ಯಕಲಾಪಗಳಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಅವರ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳೀಯ ಪೊಲೀಸರು ಹಾಗೂ ಹಿರಿಯ ರಾಜಕೀಯ ನಾಯಕರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಶವವನ್ನು ವಶಕ್ಕೆ ಪಡೆದಿರುವ ಪೊಲೀಸರು ಘಟನೆಗೆ ಸಂಬಂಧಿಸಿದಂತೆ ತನಿಖೆಯನ್ನು ಆರಂಭಿಸಿದ್ದು, ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರವೇ ಸಾವಿಗೆ ನಿಖರ ಕಾರಣ ಏನೆಂಬುದು ತಿಳಿಯಲಿದೆ.

ಈ ಸುದ್ದಿ ಹರಡುತ್ತಿದ್ದಂತೆಯೇ ಟಿಎಂಸಿ ನಾಯಕರು ಮತ್ತು ಕಾರ್ಯಕರ್ತರು ತೀವ್ರ ಕಂಬನಿ ಮಿಡಿದಿದ್ದಾರೆ. ಅಸೀಶ್ ಬ್ಯಾನರ್ಜಿ ಅವರ ಸಾವು ಪಕ್ಷಕ್ಕೆ ತುಂಬಲಾರದ ನಷ್ಟ ಎಂದು ಹಲವು ನಾಯಕರು ಕಂಬನಿ ಮಿಡಿದಿದ್ದಾರೆ.

ನಾನು ಎಂದಿಗೂ ಭ್ರಷ್ಟಾಚಾರದಲ್ಲಿ ಭಾಗಿಯಾಗಿಲ್ಲ. ರಾಜಕೀಯಕ್ಕೆ ಸೇರಿದ್ದೆ ನನ್ನ ತಪ್ಪು” ಎಂದು ಪಶ್ಚಿಮ ಬಂಗಾಳ ವಿಧಾನಸಭೆಯ ಮಾಜಿ ಉಪಸಭಾಪತಿ ಆಶಿಸ್ ಬ್ಯಾನರ್ಜಿ ಅವರ ಆತ್ಮಹತ್ಯೆ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಭಾನುವಾರ ಬೆಳಿಗ್ಗೆ ಪಕ್ಷದ ಕಚೇರಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಟಿಎಂಸಿ ಮಾಜಿ ಶಾಸಕ ಆಸೀಶ್ ಬ್ಯಾನರ್ಜಿ ಅವರ ಡೆತ್ ನೋಟ್ ಪತ್ತೆಯಾಗಿದ್ದು, ಹಲವು ವಿಷಯದಳು ಬಹಿರಂಗಗೊಂಡಿವೆ.

ರಾಂಪುರ್ಹತ್ ಪುರಸಭೆಯ ವಾರ್ಡ್ ಸಂಖ್ಯೆ V ರಲ್ಲಿರುವ ಹಟ್ಟಲಪಾರದಲ್ಲಿರುವ ಅವರ ನಿವಾಸದ ಬಳಿಯಿರುವ ಪಕ್ಷದ ಕಚೇರಿಯಿಂದ ಆತ್ಮಹತ್ಯೆ ಪತ್ರವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ. ಮಾಜಿ ಶಾಸಕರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಅವರ ಸಾವಿಗೆ ಕಾರಣವಾದ ನಿಖರವಾದ ಸಂದರ್ಭಗಳು ಇನ್ನೂ ತಿಳಿದುಬಂದಿಲ್ಲ.

ಬಂಗಾಳಿ ಭಾಷೆಯಲ್ಲಿ ಬರೆದಿರುವ ಆತ್ಮಹತ್ಯೆ ಪತ್ರದಲ್ಲಿ “ನನ್ನ ಸಾವಿಗೆ ಯಾರೂ ಕಾರಣರಲ್ಲ” ಎಂದು ಬರೆಯಲಾಗಿದೆ. ರಾಂಪುರ್ಹತ್ ಕ್ಷೇತ್ರದಿಂದ ಐದು ಬಾರಿ ತೃಣಮೂಲ ಶಾಸಕರಾಗಿರುವ ಅವರು ರಾಜಕೀಯಕ್ಕೆ ಸೇರಿದ್ದಕ್ಕಾಗಿ ಪಶ್ಚಾತ್ತಾಪ ಪಟ್ಟಿದ್ದಾರೆ. ಜೊತೆಗೆ ತಮ್ಮ ಕುಟುಂಬದ ಯಾವುದೇ ಸದಸ್ಯರು ರಾಜಕೀಯದಲ್ಲಿ ಭಾಗಿಯಾಗದಂತೆ ಸಲಹೆ ನೀಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments