Monday, June 15, 2026
Google search engine
Homeರಾಜ್ಯಅಧಿಕಾರ ಇದ್ದಾಗ ಏನು ಮಾಡಿದ್ದೇವೆ ಎಂಬುದು ಮುಖ್ಯ: ಡಿಕೆ ಶಿವಕುಮಾರ್

ಅಧಿಕಾರ ಇದ್ದಾಗ ಏನು ಮಾಡಿದ್ದೇವೆ ಎಂಬುದು ಮುಖ್ಯ: ಡಿಕೆ ಶಿವಕುಮಾರ್

ಮಾಗಡಿ: ನಾಳೆ ಕೆಲಸ ಮಾಡುತ್ತೇವೆ ಎಂಬುದು ಶತೃತ್ವ, ಇವತ್ತೇ ಕೆಲಸ ಮಾಡುತ್ತೇವೆ ಎಂಬುದು ಮಿತ್ರತ್ವ. ನಾಳೆ ಯಾರು ಇರುತ್ತಾರೋ ಇರುವುದಿಲ್ಲವೋ ಗೊತ್ತಿಲ್ಲ. ಅಧಿಕಾರ ಇದ್ದಾಗ ನಾವು ಏನು ಮಾಡಿದೆವು ಎಂಬುದು ಮುಖ್ಯ. ನಮ್ಮದು ನಾಳೆ ಎನ್ನುವ ಸರ್ಕಾರವಲ್ಲ, ಇಂದೇ ಎನ್ನುವ ಸರ್ಕಾರ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಮಾಗಡಿಯಲ್ಲಿ ಬುಧವಾರ ನಡೆದ ವೈ.ಜಿ. ಗುಡ್ಡ ಏತ ನೀರಾವರಿ ಯೋಜನೆ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾನು ಇಲ್ಲಿ ನಮ್ಮ ಕೆಲಸವನ್ನು ತೋರಿಸಲು ನಿಂತಿದ್ದೇನೆ ಹೊರತು, ಮುಂದೆ ಇಂತಹ ಕೆಲಸ ಮಾಡುತ್ತೇನೆ ಎಂದು ಹೇಳಲು ನಿಂತಿಲ್ಲ. ಶಾಸಕರಾಗಿ, ಸಂಸದರಾಗಿ ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವರು ಇಲ್ಲಿಗೆ ಬಂದು ಬುಡುಬುಡುಕೆ, ಬಣ್ಣ ಬಣ್ಣದ ಮಾತನಾಡಿ ಹೋಗಿದ್ದಾರೆ ಎಂದರು.

ರಾಜಕಾರಣಿಗಳು ಐದು ವರ್ಷಕ್ಕೊಮ್ಮೆ ಮತಕ್ಕಾಗಿ ಬಂದಾಗ ಯಾರು ಏನು ಮಾಡಿದ್ದಾರೆ ಎಂದು ಕೇಳಬೇಕು. ಕಾಂಗ್ರೆಸ್ ಕಾರ್ಯಕರ್ತರು ನೀವುಗಳು ಬೇರೆ ಪಕ್ಷಗಳ ನಿಮ್ಮ ಸ್ನೇಹಿತರ ಜತೆ ಯಾರ ಕಾಲದಲ್ಲಿ ಯಾವ ಕೆಲಸ ಆಗಿದೆ ಎಂದು ಲೆಕ್ಕಾಚಾರ ಹಾಕಬೇಕು. ಅಧಿಕಾರ ಯಾರಿಗೆ ಇರಲಿಲ್ಲ? ದಳದ ಸಿಎಂ, ಪ್ರಧಾನಿ ಎಲ್ಲರಿಗೂ ಅಧಿಕಾರ ಇತ್ತಲ್ಲವೇ? ಅಧಿಕಾರದಲ್ಲಿ ಇದ್ದಾಗ ಯಾವ ಸಾಕ್ಷಿ ಗುಡ್ಡೆ ಬಿಟ್ಟು ಹೋಗಿದ್ದಾರೆ? ಎಂದು ಅವರು ಪ್ರಶ್ನಿಸಿದರು.

ಮಂದೆಯೂ ನಮ್ಮ ಸರ್ಕಾರ ಅಧಿಕಾರದಲ್ಲಿ ಇರುತ್ತದೆ. 18-20 ತಿಂಗಳಲ್ಲಿ ಈ ಯೋಜನೆ ಮಾಡಲು ಸೂಚಿಸಲಾಗಿದೆ. ಈ ಅಧಿಕಾರ ನಂದಲ್ಲ, ನಿಮ್ಮದು. ನೀವೆಲ್ಲರೂ ಡಿ.ಕೆ. ಶಿವಕುಮಾರ್, ಡಿ.ಕೆ. ಸುರೇಶ್ ಹಾಗೂ ಬಾಲಕೃಷ್ಣ. ನಿಮ್ಮ ಹಿಂದೆ ನಾವು, ನಮ್ಮ ಹಿಂದೆ ನೀವು ಇರಬೇಕು. ಮುಂಖ್ಯಮಂತ್ರಿ ವಿಚಾರವಾಗಿ ಈಗ ಮಾತನಾಡುವುದಿಲ್ಲ, ಮಾತನಾಡಿದರೇ, ಅದನ್ನೇ ಬರೆಯುತ್ತಾರೆ. ಅದಕ್ಕೆ ಕಾಲ ಉತ್ತರ ನೀಡುತ್ತದೆ. ಸದ್ಯದಲ್ಲೇ ಭೇಟಿಯಾಗಿ ನಿಮಗೆ ತಿಳಿಸುತ್ತೇನೆ ಎಂದು ಹೇಳಿದರು.

ನಮ್ಮ ಗುರುತು ಉಳಿಸಿಕೊಳ್ಳಲು ಬೆಂಗಳೂರು ದಕ್ಷಿಣ ಜಿಲ್ಲೆ

ಈ ಮಾಗಡಿ ಗುಡ್ಡಗಾಡು ಪ್ರದೇಶ. ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ನಾನು ಜಿಲ್ಲಾ ಪಂಚಾಯ್ತಿ ಸದಸ್ಯನಾದಾಗ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಅಂತ ಇತ್ತು. ಸುರೇಶ್ ಸಂಸದರಾಗಿದ್ದು ಬೆಂಗಳೂರು ಗ್ರಾಮಾಂತರಕ್ಕೆ. ಜಿಲ್ಲೆಯ ಕೇಂದ್ರಾಡಳಿತ ರಾಮನಗರದಲ್ಲೇ ಇರಲಿ, ಆದರೆ ಜಿಲ್ಲೆಯ ಹೆಸರಿನಲ್ಲಿ ಬೆಂಗಳೂರು ಹೆಸರನ್ನು ತೆಗೆಯಬೇಡಿ ಎಂದು ಕೇಳಿದೆ. ಆದರೆ ಅವರು ಕೇಳಲಿಲ್ಲ. ನೀವು ನಮಗೆ ಅಧಿಕಾರ ಮರಳಿ ನೀಡಿದ್ದೀರಿ, ಹೀಗಾಗಿ ನಮ್ಮ ಈ ಹಿಂದಿನ ಹೆಸರನ್ನು ಉಳಿಸಿಕೊಂಡು ಬೆಂಗಳೂರು ದಕ್ಷಿಣ ಎಂದು ಹೆಸರು ಬದಲಿಸಿದ್ದೇವೆ ಎಂದು ಅವರು ತಿಳಿಸಿದರು.

ನಮ್ಮ ಕೆಲಸ, ತೀರ್ಮಾನಗಳಿಂದ ಈ ಭಾಗದ ಜನರ ಆಸ್ತಿ ಮೌಲ್ಯ ಹೆಚ್ಚಾಗಿದೆ. ಬಿಡದಿ ಟೌನ್ ಶಿಪ್ ಯೋಜನೆ ಭೂಸಂತ್ರಸ್ತರಿಗೆ ನಾನು ಎಕರೆಗೆ 2.50 ಕೋಟಿ ಪರಿಹಾರ ನಿಗದಿ ಮಾಡಿದ್ದೇನೆ. ಕುಮಾರಸ್ವಾಮಿ ಅವರು ಅಲ್ಲಿ ಎಕರೆಗೆ 6-7 ಸಾವಿರಕ್ಕೆ ಜಮೀನು ತೆಗೆದುಕೊಂಡಿದ್ದರು. ನಾನು ಕೂಡ ಎಕರೆಗೆ 7-8 ಲಕ್ಷಕ್ಕೆ 10-20 ಎಕರೆ ಜಮೀನು ಖರೀದಿ ಮಾಡಿದ್ದೇನೆ. ಭೂಸ್ವಾಧೀನವಾಗುವ ಕುಮಾರಸ್ವಾಮಿ ಅವರ ಜಮೀನಿಗೂ 2.50 ಕೋಟಿ ನಿಗದಿ ಮಾಡಿದ್ದೇವೆ. ನಾವು ಅಧಿಕಾರಕ್ಕೆ ಬಂದಾಗ ನಾವು ತೆಗೆದುಕೊಳ್ಳುವ ಒಂದು ತೀರ್ಮಾನ ಜನರಿಗೆ ಶಕ್ತಿ ತುಂಬುವಂತಿರಬೇಕು ಎಂದು ಹೇಳಿದರು.

ರಾಜ್ಯದ ಜನ 136 ಸೀಟುಗಳನ್ನು ನೀಡಿ ನಮಗೆ ಶಕ್ತಿ ನೀಡಿದ್ದಕ್ಕೆ ನಾವು ಕೊಟ್ಟ ಮಾತಿನಂತೆ ಐದು ಗ್ಯಾರಿಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ನಿಮ್ಮ ಮನೆಗಳಿಗೆ ಉಚಿತ ವಿದ್ಯುತ್, ಬಡ ಮಹಿಳೆಯರಿಗೆ ತಿಂಗಳಿಗೆ 2 ಸಾವಿರ, 10 ಕೆ.ಜಿ ಅಕ್ಕಿ, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ವ್ಯವಸ್ಥೆ, ನಿರುದ್ಯೋಗಿ ಯುವಕರಿಗೆ ಆರ್ಥಿಕ ಶಕ್ತಿ ನೀಡಿದ್ದೇವೆ. ನಿಮ್ಮ ಕಾಲದಲ್ಲಿ ಒಂದು ನೀವು ಒಂದೇ ಒಂದು ಟ್ರಾನ್ಸ್ಫಾರ್ಮರ್ ಕೊಟ್ಟಿದ್ದೀರಾ, ರೈತರ ಮಕ್ಕಳು ಎಂದು ಹೇಳಿಕೊಳ್ಳುವ ನೀವು ಒಂದು ಕೆರೆಯನ್ನು ತುಂಬಿಸಿದ್ದೀರಾ? ಎಂದು ಕುಮಾರಣ್ಣ, ಇಲ್ಲಿನ ಸಂಸದರು ಹಾಗೂ ದಳದ ನಾಯಕರಿಗೆ ಕೇಳಬೇಕು” ಎಂದು ಕರೆ ನೀಡಿದರು.

ನಾವು ಶಾಶ್ವತವಲ್ಲ. ನಮ್ಮ ಕೆಲಸಗಳು ಮಾತ್ರ ಶಾಶ್ವತ. ಕೆಂಪೇಗೌಡರನ್ನು ನಾವು ನೆನೆಯುವುದು ಶಾಶ್ವತ. ಬಾಲಕೃಷ್ಣ ಅವರು ಚಕ್ರಬಾವಿಯಲ್ಲಿ ಒಂದು ಶಾಲೆ ಬೇಕು ಎಂದು ಕೇಳಿದರು. ನಾನು ಚಿಕ್ಕವನಾಗಿದ್ದಾಗ ಚಕ್ರಬಾವಿಗೆ ಬರುತ್ತಿದ್ದೆ. ಈ ಮನವಿ ಬಗ್ಗೆ ನಾನು, ಸುರೇಶ್ ಅವರೆಲ್ಲಾ ಸೇರಿ ಚರ್ಚೆ ಮಾಡಿ ಸಾಕ್ಷಿಗುಡ್ಡೆ ಬಿಟ್ಟು ಹೋಗುತ್ತೇವೆ ಎಂದು ಡಿಕೆ ಶಿವಕುಮಾರ್ ನುಡಿದರು.

ನಾನು ಇಂಧನ ಸಚಿವನಾಗಿದ್ದಾಗ ಎಷ್ಟು ಸ್ಟೇಷನ್ ಮಾಡಿದ್ದೇನೆ, ಹೆಚ್ ವಿಡಿಎಶ್ ಯೋಜನೆಯಲ್ಲಿ ನಾನು ಕೊಟ್ಟಿರುವ ಟ್ರಾನ್ಸ್ಫಾರ್ಮರ್ ಗಳು, ಈ ಕೆರೆ ತುಂಬಿಸುವ ಯೋಜನೆ ಸೇರಿದಂತೆ ಮಾಗಡಿ ಕ್ಷೇತ್ರದ ನೀರಾವರಿ ಯೋಜನೆಗೆ 1 ಸಾವಿರ ಕೋಟಿ ಅನುದಾನ ನೀಡಿದ್ದೇನೆ. ಕುಣಿಗಲ್ ಕ್ಷೇತ್ರದ ನೀರಾವರಿ ಯೋಜನೆಗಳಿಗೆ 1 ಸಾವಿರ ಕೋಟಿ, ರಾಮನಗರ ಹಾಗೂ ಕನಕಪುರ ಕ್ಷೇತ್ರಗಳಿಗೆ 1 ಸಾವಿರ ಕೋಟಿ ಅನುದಾನ ನೀಡಲಾಗಿದೆ. ಈ ಬಗ್ಗೆ ಬಿಜೆಪಿಯವರು ಉತ್ತರ ನೀಡಬೇಕು. ನಿಮ್ಮ ಕಾಲದಲ್ಲಿ ನೀವು ಏನು ಮಾಡಿದ್ದೀರಿ ಎಂದು ಹೇಳಿ. ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬುದಕ್ಕೆ ಇದೇ ಸಾಕ್ಷಿ” ಎಂದು ಹೇಳಿದರು.

ದೇವರು ಬಾಲಕೃಷ್ಣಗೆ ಇನ್ನಷ್ಟು ಶಕ್ತಿ ಕೊಡಲಿ

ನೀವು ಆಯ್ಕೆ ಮಾಡಿರುವ ಬಾಲಕೃಷ್ಣ ಅವರು ನಿಮಗೆ ಇಷ್ಟೆಲ್ಲಾ ಕೆಲಸ ಮಾಡಿದ್ದಾರೆ. ಅವರಿಗೆ ಇನ್ನಷ್ಟು ಶಕ್ತಿ ತುಂಬಬೇಕು. ನಾನು, ರಂಗನಾಥ್, ಸುರೇಶ್ ಇಲ್ಲಿಗೆ ಬಂದಿರುವುದೇ ಬಾಲಕೃಷ್ಣ ಅವರ ಕೈಬಲಪಡಿಸಲು. ಅವರು ಉತ್ತಮ ಕಾರ್ಯ ಮಾಡುತ್ತಿದ್ದು, ಅವರಿಗೆ ದೇವರು ಇನ್ನಷ್ಟು ಶಕ್ತಿ ಕೊಡುತ್ತಾನೆ ಎಂಬ ವಿಶ್ವಾಸ ನನಗಿದೆ ಎಂದು ತಿಳಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments