Friday, 30 October 2026 — Kannadavahini
BREAKING NEWS
ಮನರಂಜನೆ ಇಂದಿನಿಂದ 3 ದಿನ ಜೀ ಕನ್ನಡದಲ್ಲಿ ಕುಟುಂಬ ಅವಾರ್ಡ್ಸ್ ಸಂಭ್ರಮ! ರಾಜ್ಯ ಹಾಸನಾಂಬೆ ಗರ್ಭಗುಡಿ ಓಪನ್: ನಾಳೆಯಿಂದ ಸಾರ್ವಜನಿಕರಿಗೆ ದರ್ಶನ ರಾಜ್ಯ ನ.1ರಿಂದ ಹಾಲು, ಸಾರಿಗೆ ದರ ಏರಿಕೆ: ದೀಪಾವಳಿಗೆ ರೈತರಿಗೆ ಸಿಹಿ, ಜನರಿಗೆ ದುಬಾರಿ! ಅಪರಾಧ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಕಟ್ಟುಕಥೆ: ಸಿಸಿಬಿ ತನಿಖೆಯಲ್ಲಿ ಪತ್ತೆ ರಾಜ್ಯ ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ಮನರಂಜನೆ ಇಂದಿನಿಂದ 3 ದಿನ ಜೀ ಕನ್ನಡದಲ್ಲಿ ಕುಟುಂಬ ಅವಾರ್ಡ್ಸ್ ಸಂಭ್ರಮ! ರಾಜ್ಯ ಹಾಸನಾಂಬೆ ಗರ್ಭಗುಡಿ ಓಪನ್: ನಾಳೆಯಿಂದ ಸಾರ್ವಜನಿಕರಿಗೆ ದರ್ಶನ ರಾಜ್ಯ ನ.1ರಿಂದ ಹಾಲು, ಸಾರಿಗೆ ದರ ಏರಿಕೆ: ದೀಪಾವಳಿಗೆ ರೈತರಿಗೆ ಸಿಹಿ, ಜನರಿಗೆ ದುಬಾರಿ! ಅಪರಾಧ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಕಟ್ಟುಕಥೆ: ಸಿಸಿಬಿ ತನಿಖೆಯಲ್ಲಿ ಪತ್ತೆ ರಾಜ್ಯ ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ
ಕ್ರೀಡೆ

10 ಎಸೆತದಲ್ಲಿ 50 ರನ್ ದೋಚಿ ಶತಕ ಪೂರೈಸಿದ ವಿಲ್ ಜಾಕ್ಸ್!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 3 ವೀಕ್ಷಣೆಗಳು

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಧ್ಯಮ ಕ್ರಮಾಂಕದ ಬ್ಯಾಟ್ಸ್ ಮನ್ ವಿಲ್ ಜಾಕ್ಸ್ ಐಪಿಎಲ್ ಇತಿಹಾಸದಲ್ಲೇ ಅತ್ಯಂತ ವೇಗದ ಶತಕ ಗಳಿಸಿದ 5ನೇ ಹಾಗೂ ಆರ್ ಸಿಬಿ ಪರ 2ನೇ ಅತೀ ವೇಗದ ಶತಕದ ದಾಖಲೆಗೆ ಪಾತ್ರರಾಗಿದ್ದಾರೆ.

ಅಹಮದಾಬಾದ್ ನಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ಕೊಹ್ಲಿ ಮತ್ತು ವಿಲ್ ಜಾಕ್ಸ್ ಮುರಿಯದ 2ನೇ ವಿಕೆಟ್ ಗೆ 166 ರನ್ ಪೇರಿಸಿದರು. ಜಾಕ್ಸ್ 41 ಎಸೆತಗಳಲ್ಲಿ 5 ಬೌಂಡರಿ ಮತ್ತು 10 ಸಿಕ್ಸರ್ ಸಿಡಿಸಿ ಬರೋಬ್ಬರಿ ಶತಕ ಗಳಿಸಿ ಮಿಂಚು ಹರಿಸಿದರೆ, ವಿರಾಟ್ ಕೊಹ್ಲಿ 44 ಎಸೆತಗಳಲ್ಲಿ 6 ಬೌಂಡರಿ ಮತ್ತು 3 ಸಿಕ್ಸರ್ ಸಹಾಯದಿಂದ 70 ರನ್ ಬಾರಿಸಿ ಔಟಾಗದೇ ಉಳಿದರು.

ಆರಂಭದಲ್ಲಿ ರನ್ ಗಳಿಸಲು ಪರದಾಡುತ್ತಿದ್ದ ವಿಲ್ ಜಾಕ್ಸ್ 31 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಆದರೆ ನಂತರ ಕೇವಲ 10 ಎಸೆತಗಳಲ್ಲಿ 50 ರನ್ ಗಳಿಸಿ ಶತಕ ಪೂರೈಸಿದರು ಅಂದರೆ ಅವರ ಸಿಡಿಲಬ್ಬರದ ಬ್ಯಾಟಿಂಗ್ ಹೇಗಿತ್ತು ಎಂಬುದನ್ನು ಊಹಿಸಬಹುದು.

ಒಂದು ಓವರ್ ನಲ್ಲಿ 29 ಮತ್ತು ಆಡಿದ ಕೊನೆಯ ಓವರ್ ನಲ್ಲಿ 30 ರನ್ ಕೊಳ್ಳೆ ಹೊಡೆದರು. 7ರಿಂದ 16 ಓವರ್ ಗಳಲ್ಲಿ ಕೊಹ್ಲಿ ಮತ್ತು ಜಾಕ್ಸ್ 143 ರನ್ ಚಚ್ಚಿದರು. ಇದರಲ್ಲಿ ಜಾಕ್ಸ್ ಗಳಿಸಿದ್ದೇ 95 ರನ್ ಆಗಿದೆ.

ಕೊಹ್ಲಿ 7 ಬಾರಿ ಐಪಿಎಲ್ ನಲ್ಲಿ 500ಕ್ಕಿಂತ ಹೆಚ್ಚು ರನ್ ಗಳಿಸಿದ ಆಟಗಾರ ಎಂಬ ಗೌರವಕ್ಕೆ ಪಾತ್ರರಾದರು. ಅಲ್ಲದೇ ಐಪಿಎಲ್ ನಲ್ಲಿ ಈ ಬಾರಿ ಪಿಂಕ್ ಕ್ಯಾಪ್ ಗೌರವಕ್ಕೂ ಪಾತ್ರರಾಗಿದ್ದಾರೆ.

ಆರ್ ಸಿಬಿ ಐಪಿಎಲ್ ನಲ್ಲಿ 200ಕ್ಕಿಂತ ಹೆಚ್ಚು ರನ್ ಚೇಸ್ ಮಾಡುವಾಗ ಕೇವಲ 1 ವಿಕೆಟ್ ಕಳೆದುಕೊಂಡು ಗೆದ್ದ ಮೊದಲ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8396 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment