ಹಾಲಿ ಚಾಂಪಿಯನ್ ಸ್ಪೇನ್ ನ ಕಾರ್ಲೊಸ್ ಅಲ್ಕರೇಜ್ ಸತತ ಎರಡನೇ ಬಾರಿ ವಿಂಬಲ್ಡನ್ ಟೆನಿಸ್ ಟೂರ್ನಿಯ ಫೈನಲ್ ಗೆ ಲಗ್ಗೆ ಹಾಕಿದ್ದಾರೆ.
ಶುಕ್ರವಾರ ನಡೆದ ಪುರುಷರ ಸಿಂಗಲ್ಸ್ ಸೆಮಿಫೈನಲ್ ನಲ್ಲಿ ವಿಶ್ವದ 3ನೇ ಶ್ರೇಯಾಂಕಿತ ಕಾರ್ಲೊಸ್ ಅಲ್ಕರೇಜ್ 6-7, 6-3, 6-4, 6-4 ಸೆಟ್ ಗಳಿಂದ ರಷ್ಯಾದ ಡೇನಿಲ್ ಮೆಡ್ವೆಡೆವ್ ಅವರನ್ನು ಸೋಲಿಸಿ ಪ್ರಶಸ್ತಿ ಸುತ್ತು ಪ್ರವೇಶಿಸಿದರು.
1973ರಲ್ಲಿ ಎಟಿಪಿ ರ್ಯಾಂಕಿಂಗ್ ಆರಂಭಗೊಂಡ ನಂತರ ಇದೇ ಮೊದಲ ಬಾರಿಗೆ ಮೂರು ಮಾದರಿಯ ಗ್ರ್ಯಾನ್ ಸ್ಲಾಮ್ ಟೂರ್ನಿಯ ಫೈನಲ್ ತಲುಪಿದ ಅತ್ಯಂತ ಕಿರಿಯ ಆಟಗಾರ ಎಂಬ ದಾಖಲೆಗೆ ಕಾರ್ಲೊಸ್ ಆಲ್ಕರೇಜ್ ಪಾತ್ರರಾಗಿದ್ದಾರೆ.
ಭಾನುವಾರ ನಡೆಯುವ ಫೈನಲ್ ನಲ್ಲಿ 7 ಬಾರಿಯ ಚಾಂಪಿಯನ್ ಸರ್ಬಿಯಾದ ನೊವಾಕ್ ಜೊಕೊವಿಕ್ ಮತ್ತು ಲೊರೆನ್ಜೊ ಮುಸೆಟ್ಟಿ ನಡುವಣ ಪಂದ್ಯದ ವಿಜೇತರನ್ನು ಎದುರಿಸಲಿದ್ದಾರೆ.