Thursday, May 14, 2026
Google search engine
Homeಅಪರಾಧಮದುವೆ ಕ್ಯಾನ್ಸಲ್ ಆಗಿದ್ದಕ್ಕೆ ರೈತ ಸಂಪರ್ಕ ಕೇಂದ್ರದಲ್ಲಿ ಯುವತಿ ಆತ್ಮಹತ್ಯೆ!

ಮದುವೆ ಕ್ಯಾನ್ಸಲ್ ಆಗಿದ್ದಕ್ಕೆ ರೈತ ಸಂಪರ್ಕ ಕೇಂದ್ರದಲ್ಲಿ ಯುವತಿ ಆತ್ಮಹತ್ಯೆ!

ಮದುವೆ ಮುರಿದು ಬಿದ್ದಿದ್ದರಿಂದ ನೊಂದ ಯುವತಿ ಮಂಡ್ಯ ಜಿಲ್ಲೆಯ ಕೆಆರ್ ಪೇಟೆಯ ರೈತ ಸಂಪರ್ಕ ಕೇಂದ್ರ ಕಚೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕೆಆರ್ ಪೇಟೆ ತಾಲೂಕಿನ ಕಿಕ್ಕೇರಿ ಗ್ರಾಮದ ರೈತ ಸಂಪರ್ಕ ಕೇಂದ್ರದ ಕಚೇರಿಯಲ್ಲಿ ಕೆಆರ್ ಪೇಟೆ ತಾಲೂಕಿನ ವಳಗೆರೆ ಮೆಣಸ ಗ್ರಾಮದ ಕಾವ್ಯ (26) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕಾವ್ಯಾಗೆ 15 ದಿನಗಳ ಹಿಂದೆ ಹಾಸನದ ಹುಡುಗನ ಜೊತೆ ಮದುವೆ ಫಿಕ್ಸ್ ಆಗಿತ್ತು. ಆದರೆ ಹುಡುಗನ ಮನೆಯವರು ಇತ್ತೀಚೆಗೆ ಮದುವೆ ಬೇಡ ಎಂದು ಮದುವೆ ಕ್ಯಾನ್ಸಲ್ ಮಾಡಿದ್ದರು. ಇದರಿಂದ ಮನನೊಂದ ಯುವತಿ ಕಚೇರಿಯಲ್ಲಿ ಶುಕ್ರವಾರ ನಿದ್ರೆ ಮಾತ್ರೆ ಸೇವಿಸಿದ್ದರು.

ಅಸ್ವಸ್ಥಗೊಂಡ ಯುವತಿಯನ್ನು ತಕ್ಷಣವೇ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ. ಕಿಕ್ಕೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments