Saturday, 14 November 2026 — Kannadavahini
BREAKING NEWS
ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್
ದೇಶ

ಮೆದುಳು ತಿನ್ನುವ ಅಮಿಬಾಗೆ ಮಹಿಳೆ ಬಲಿ: ಕೇರಳದಲ್ಲಿ 5ಕ್ಕೇರಿದ ಸಾವಿನ ಸಂಖ್ಯೆ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 19 ವೀಕ್ಷಣೆಗಳು
amiba

ಮೆದುಳು ತಿನ್ನುವ ಅಮೀಬಾ ಸೋಂಕಿಗೆ ಮಹಿಳೆಯೊಬ್ಬರು ಬಲಿಯಾಗಿದ್ದಾರೆ. ಇದರಿಂದ ಕೇರಳದಲ್ಲಿ ಕಳೆದ ಒಂದು ತಿಂಗಳಲ್ಲಿ ಅಮಿಬಾಗೆ ಮೃತಪಟ್ಟರ ಸಂಖ್ಯೆ 5ಕ್ಕೇರಿದೆ.

ಕೊಯಿಕ್ಕೋಡ್​ನ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ವಂಡೂರಿನ ಶೋಭನಾ (56) ಎಂಬಾಕೆ ಮೃತಪಟ್ಟಿದ್ದಾರೆ. ಇದಕ್ಕೂ ಮುನ್ನ 9 ವರ್ಷದ ಬಾಲಕಿ ಓಮಸ್ಸೇರಿಯ, ಮೂರು ತಿಂಗಳ ಮಗು, ಮಲಪ್ಪುರಂನ ಮಹಿಳೆ ಮತ್ತು ವಯನಾಡಿನ ರತೀಶ್ ಎಂಬುವರು ಕೂಡಾ ಇದೇ ಸೋಂಕಿಗೆ ಬಲಿಯಾಗಿದ್ದರು.

‘ಕಾಸರಗೋಡಿನ ಯುವಕ ಮತ್ತು ಮಲಪ್ಪುರಂನ ವ್ಯಕ್ತಿಯೊಬ್ಬರು ಪ್ರಸ್ತುತ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಗಂಭೀರ ಸ್ಥಿತಿಯಲ್ಲಿದ್ದಾರೆ. ಒಟ್ಟು 10 ಜನರು ಈ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿದ್ದಾರೆ’ ಎಂದು ಡಿಎಂಒ ಮಾಹಿತಿ ನೀಡಿದ್ದಾರೆ.

ಮೆದುಳನ್ನು ತಿನ್ನುವ ಅಮೀಬಾ ಲಕ್ಷಣಗಳು

ನೇಗ್ಲೇರಿಯಾ ಫೌಲೆರಿ ಎಂದು ಕರೆಯಲ್ಪಡುವ ಅಮೀಬಾವನ್ನು ಸಾಮಾನ್ಯವಾಗಿ ‘ಮೆದುಳನ್ನು ತಿನ್ನುವ ಅಮೀಬಾ’ ಎಂದು ಕರೆಯಲಾಗುತ್ತದೆ. ಇದು ಸಾಮಾನ್ಯವಾಗಿ ಸರೋವರಗಳು, ನದಿಗಳು, ಬುಗ್ಗೆಗಳು ಮತ್ತು ಕೊಳಗಳಂತಹ ಸಿಹಿನೀರಿನಲ್ಲಿ ಕಂಡುಬರುತ್ತದೆ, ಬೆಚ್ಚಗಿನ ನೀರಿನಲ್ಲಿ ಸಮೃದ್ಧವಾಗಿರುತ್ತದೆ.

ಸಾಮಾನ್ಯವಾಗಿ ಕಲುಷಿತ ನೀರಿನಲ್ಲಿ ಈಜುವಾಗ ಅಥವಾ ಡೈವಿಂಗ್ ಮಾಡುವಾಗ ಅಮೀಬಾ ಮೂಗಿನ ಮೂಲಕ ಮಾನವ ದೇಹವನ್ನು ಪ್ರವೇಶಿಸುತ್ತದೆ. ಒಮ್ಮೆ ಒಳಗೆ ಹೋದ ನಂತರ, ಅದು ಮೆದುಳನ್ನು ತಲುಪುತ್ತದೆ. ಇದು ಪ್ರಾಥಮಿಕ ಅಮೀಬಿಕ್ ಮೆನಿಂಗೊಎನ್ಸೆಫಾಲಿಟಿಸ್ (PAM) ಎಂದು ಕರೆಯಲ್ಪಡುವ ತೀವ್ರವಾದ ಸೋಂಕನ್ನು ಉಂಟುಮಾಡುತ್ತದೆ. ಈ ಸೋಂಕಿನಿಂದಾಗಿ 1 ರಿಂದ 9 ದಿನಗಳಲ್ಲಿ ತೀವ್ರ ತಲೆನೋವು, ಜ್ವರ, ವಾಂತಿ, ಕುತ್ತಿಗೆ ಬಿಗಿತ, ಗೊಂದಲಗಳು ಕಾಣಿಸಿಕೊಳ್ಳುತ್ತವೆ.

ಸೋಂಕಿನ ಮೂಲ ಇನ್ನೂ ಸ್ಪಷ್ಟವಾಗಿಲ್ಲ. ಆರೋಗ್ಯ ಅಧಿಕಾರಿಗಳು ಸೋಂಕಿನ ನಿಖರವಾದ ಮೂಲವನ್ನು ಇನ್ನೂ ಗುರುತಿಸಿಲ್ಲ. ಚಿಕಿತ್ಸೆ ಪಡೆಯುತ್ತಿರುವ ಕೆಲವು ರೋಗಿಗಳು ಕೊಳಗಳು ಅಥವಾ ನದಿಗಳಲ್ಲಿ ಈಜಿದ ಇತಿಹಾಸವನ್ನು ಹೊಂದಿಲ್ಲ. ಸಾವನ್ನಪ್ಪಿದ ಮೂರು ತಿಂಗಳ ಮಗುವಿನ ಸಂಬಂಧಿಕರು ಮಗುವನ್ನು ಬಾವಿ ನೀರಿನಲ್ಲಿ ಸ್ನಾನ ಮಾಡಿಸಲಾಗಿತ್ತು ಎಂದು ಹೇಳಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8412 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment