Wednesday, June 24, 2026
Google search engine
Homeಆರೋಗ್ಯಬಿರಿಯಾನಿಯಲ್ಲಿ ಹಲ್ಲಿ ಪತ್ತೆ; ಮಹಿಳೆ ಆಸ್ಪತ್ರೆಗೆ

ಬಿರಿಯಾನಿಯಲ್ಲಿ ಹಲ್ಲಿ ಪತ್ತೆ; ಮಹಿಳೆ ಆಸ್ಪತ್ರೆಗೆ

ಬಂಗಾರಪೇಟೆ: ನಗರದ ಖಾಸಗಿ ಬಿರಿಯಾನಿ ಹೋಟೆಲ್‌ನಲ್ಲಿ ಖರೀದಿಸಿದ್ದ ಮಟನ್ ಬಿರಿಯಾನಿಯಲ್ಲಿ ಸತ್ತು ಬಿದ್ದಿದ್ದ ಹಲ್ಲಿ ಪತ್ತೆಯಾದ ಪ್ರಕರಣವು ಸಾರ್ವಜನಿಕರಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿದೆ.

ಘಟನೆ ಬೆಳಕಿಗೆ ಬಂದ ಬೆನ್ನಲ್ಲೇ ಆರೋಗ್ಯ ಇಲಾಖೆ ಹಾಗೂ ನಗರಸಭೆ ಅಧಿಕಾರಿಗಳು ಹೋಟೆಲ್‌ಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪರಿಶೀಲನೆ ವೇಳೆ ಆಹಾರ ಸುರಕ್ಷತೆ ಹಾಗೂ ಸ್ವಚ್ಛತೆಗೆ ಸಂಬAಧಿಸಿದ ಹಲವು ಗಂಭೀರ ಲೋಪಗಳು ಕಂಡುಬಂದಿರುವುದಾಗಿ ತಿಳಿದುಬಂದಿದೆ.

ಪಟ್ಟಣದ ನಿವಾಸಿ ಲಲಿತಾ ಅವರು ಸಂಜೆ ವೇಳೆ ಬಿಜಿಟಿ ಬಿರಿಯಾನಿ ಹೋಟೆಲ್‌ನಿಂದ ಮಟನ್ ಬಿರಿಯಾನಿ ಖರೀದಿಸಿ ಹೋಟೆಲ್‌ನಲ್ಲಿ ಊಟ ಮಾಡುವ ಸಂದರ್ಭದಲ್ಲಿ ಬಿರಿಯಾನಿಯೊಳಗೆ ಸತ್ತು ಬಿದ್ದಿದ್ದ ಹಲ್ಲಿ ಕಂಡುಬAದಿದ್ದು, ಇದರಿಂದ ಅವರು ಬೆಚ್ಚಿಬಿದ್ದಿದ್ದಾರೆ. ಬಿರಿಯಾನಿ ಸೇವಿಸಿದ ಬಳಿಕ ಅವರಿಗೆ ವಾಂತಿ ಹಾಗೂ ಭೇದಿ ಕಾಣಿಸಿಕೊಂಡ ಹಿನ್ನೆಲೆ ಕುಟುಂಬಸ್ಥರು ತಕ್ಷಣ ಬಂಗಾರಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಪ್ರಸ್ತುತ ಅವರು ಚಿಕಿತ್ಸೆ ಪಡೆಯುತ್ತಿದ್ದು ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದುಬಂದಿದೆ.

ಘಟನೆ ಕುರಿತು ಮಾಹಿತಿ ಪಡೆದ ಆರೋಗ್ಯ ನಿರೀಕ್ಷಕ ಪ್ರತೀಶ್ ಹಾಗೂ ನಗರಸಭೆ ಪೌರಾಯುಕ್ತರು ಹೋಟೆಲ್‌ಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪರಿಶೀಲನೆ ವೇಳೆ ಅಡುಗೆ ಕೋಣೆಯಲ್ಲಿ ಸಮರ್ಪಕ ಸ್ವಚ್ಛತೆ ಇಲ್ಲದಿರುವುದು, ದುರ್ವಾಸನೆ ಬೀರುತ್ತಿರುವುದು ಹಾಗೂ ಆಹಾರ ತಯಾರಿಕಾ ಅಡುಗೆಕೋಣೆಯಲ್ಲಿ ಆರೋಗ್ಯಕರ ರೀತಿಯಲ್ಲಿ ನಿರ್ವಹಿಸದಿರುವುದು ಕಂಡುಬಂದಿದೆ.

ಇದೇ ವೇಳೆ ಅಡುಗೆ ಸಿಬ್ಬಂದಿ ಮಾಸ್ಕ್ ಹಾಗೂ ಅಗತ್ಯ ಸುರಕ್ಷತಾ ಉಪಕರಣಗಳನ್ನು ಬಳಸದೆ ಆಹಾರ ತಯಾರಿಕೆಯಲ್ಲಿ ತೊಡಗಿರುವುದು ಅಧಿಕಾರಿಗಳ ಗಮನಕ್ಕೆ ಬಂದಿದೆ. ಆಹಾರ ಪದಾರ್ಥಗಳಿಗೆ ನೊಣಗಳು ಹಾಗೂ ಇತರೆ ಕೀಟಗಳು ಪ್ರವೇಶಿಸದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿಲ್ಲ ಎಂಬ ಆರೋಪವೂ ಕೇಳಿಬಂದಿದೆ. ಆಹಾರ ಸುರಕ್ಷತಾ ನಿಯಮಗಳ ಪ್ರಕಾರ ಆಹಾರ ತಯಾರಿಕೆ ನಡೆಯಬೇಕಾದರೆ ಸ್ವಚ್ಛತೆ ಮತ್ತು ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕಾಗಿದ್ದು, ಇಲ್ಲಿ ಹಲವು ಕೊರತೆಗಳು ಕಂಡುಬAದಿವೆ ಎನ್ನಲಾಗಿದೆ.

ಪರಿಶೀಲನೆಯ ಸಂದರ್ಭದಲ್ಲಿ ವಾಣಿಜ್ಯ ಬಳಕೆಗೆ ಉದ್ದೇಶಿತ ಗ್ಯಾಸ್ ಸಿಲಿಂಡರ್‌ಗಳ ಬದಲಿಗೆ ಗೃಹ ಬಳಕೆಯ ಗ್ಯಾಸ್ ಸಿಲಿಂಡರ್‌ಗಳನ್ನು ಬಳಸುತ್ತಿರುವುದು ಬೆಳಕಿಗೆ ಬಂದಿದೆ. ಜೊತೆಗೆ ಬಿರಿಯಾನಿಯ ಗುಣಮಟ್ಟ ಹಾಗೂ ಬಳಕೆಯಲ್ಲಿರುವ ಪದಾರ್ಥಗಳ ಕುರಿತು ಅನುಮಾನಗಳು ವ್ಯಕ್ತವಾಗಿದ್ದು, ಆಹಾರ ಪದಾರ್ಥಗಳ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯ ಪರೀಕ್ಷೆಗೆ ಕಳುಹಿಸಲಾಗಿದೆ.

ಕೆಲವು ಗ್ರಾಹಕರು ಬಿರಿಯಾನಿಯಲ್ಲಿ ಬಳಸಲಾಗುತ್ತಿರುವ ಮಾಂಸ ಹಾಗೂ ಕೊಬ್ಬಿನ ಗುಣಮಟ್ಟದ ಬಗ್ಗೆಯೂ ಅನುಮಾನ ವ್ಯಕ್ತಪಡಿಸಿದ್ದು, ಅಧಿಕಾರಿಗಳು ಈ ಕುರಿತಾಗಿಯೂ ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಆಹಾರ ಮಾದರಿಗಳ ಪರೀಕ್ಷಾ ವರದಿ ಬಂದ ಬಳಿಕ ನಿಖರ ಮಾಹಿತಿ ಲಭ್ಯವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸ್ಥಳೀಯರ ಪ್ರಕಾರ, ಈ ಹೋಟೆಲ್ ವಿರುದ್ಧ ಈ ಹಿಂದೆ ಸಹ ಆಹಾರದ ಗುಣಮಟ್ಟ, ಸ್ವಚ್ಛತೆ ಹಾಗೂ ಗ್ರಾಹಕರ ಆರೋಗ್ಯಕ್ಕೆ ಸಂಬAಧಿಸಿದAತೆ ಹಲವು ದೂರುಗಳು ಕೇಳಿಬಂದಿದ್ದವು. ಆದರೆ ದೂರುಗಳಿದ್ದರೂ ಹೋಟೆಲ್ ನಿರ್ವಹಣೆ ಸೂಕ್ತ ಕ್ರಮ ಕೈಗೊಳ್ಳದೆ ವ್ಯವಹಾರ ಮುಂದುವರಿಸಿದೆ ಎಂಬ ಆರೋಪಗಳು ಸಾರ್ವಜನಿಕರಿಂದ ಕೇಳಿಬರುತ್ತಿವೆ. ಹೆಚ್ಚಿನ ಬೆಲೆಗೆ ಆಹಾರ ಮಾರಾಟ ಮಾಡುತ್ತಿದ್ದರೂ ಗುಣಮಟ್ಟ ಹಾಗೂ ಸುರಕ್ಷತೆಯ ವಿಷಯದಲ್ಲಿ ನಿರ್ಲಕ್ಷ್ಯ ವಹಿಸಲಾಗಿದೆ ಎಂದು ಗ್ರಾಹಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಘಟನೆ ಕುರಿತು ಪ್ರತಿಕ್ರಿಯಿಸಿರುವ ಸಾರ್ವಜನಿಕರು, ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ಮಾನದಂಡಗಳನ್ನು ಉಲ್ಲಂಘಿಸುವ ಯಾವುದೇ ಹೋಟೆಲ್ ಅಥವಾ ಆಹಾರ ಮಳಿಗೆಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು, ಆಹಾರ ತಯಾರಿಕೆ ಮತ್ತು ಮಾರಾಟದಲ್ಲಿ ಸ್ವಚ್ಛತೆ ಕಾಪಾಡುವುದು ಕೇವಲ ಕಾನೂನುಬದ್ಧ ಕರ್ತವ್ಯವಲ್ಲ, ಗ್ರಾಹಕರ ಆರೋಗ್ಯದ ರಕ್ಷಣೆಯ ಜವಾಬ್ದಾರಿಯೂ ಆಗಿದೆ ಎಂದು ಅವರು ಹೇಳಿದ್ದಾರೆ.

ಪ್ರಸ್ತುತ ಹೋಟೆಲ್‌ನಿಂದ ಆಹಾರ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿದ್ದು, ವರದಿ ಬಂದ ನಂತರ ಆಹಾರ ಸುರಕ್ಷತಾ ಇಲಾಖೆ ಹಾಗೂ ಸಂಬAಧಪಟ್ಟ ಅಧಿಕಾರಿಗಳು ಮುಂದಿನ ಕಾನೂನು ಕ್ರಮ ಕೈಗೊಳ್ಳಲಿದ್ದಾರೆ. ಈ ನಡುವೆ ಘಟನೆ ಪಟ್ಟಣದ ಜನರಲ್ಲಿ ಆತಂಕ ಸೃಷ್ಟಿಸಿದ್ದು, ಜಿಲ್ಲೆಯಾದ್ಯಂತ ಹೋಟೆಲ್‌ಗಳು ಹಾಗೂ ಆಹಾರ ಮಳಿಗೆಗಳ ಮೇಲೆ ವಿಶೇಷ ಪರಿಶೀಲನೆ ನಡೆಸುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

ಆದಾಗ್ಯೂ, ಹೋಟೆಲ್ ವಿರುದ್ಧ ಕೇಳಿಬಂದಿರುವ ಆರೋಪಗಳ ಸತ್ಯಾಸತ್ಯತೆ ಹಾಗೂ ಆಹಾರದಲ್ಲಿ ಕಂಡುಬAದ ಅಂಶಗಳ ಕುರಿತು ಅಧಿಕೃತ ಪ್ರಯೋಗಾಲಯ ವರದಿ ಮತ್ತು ಇಲಾಖಾ ತನಿಖೆಯ ನಂತರವೇ ಅಂತಿಮ ನಿರ್ಧಾರ ಹೊರಬರಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments