ಭಾರತ ವನಿತೆಯರ ತಂಡ 6 ವಿಕೆಟ್ ಗಳಿಂದ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ತಂಡವನ್ನು ಸೋಲಿಸಿ ಟಿ-20 ವಿಶ್ವಕಪ್ ನಲ್ಲಿ ಮೊದಲ ಗೆಲುವು ದಾಖಲಿಸಿತು.
ದುಬೈನಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ ತಂಡ 8 ವಿಕೆಟ್ ಗಳಿಗೆ 105 ರನ್ ಗಳಿಗೆ ನಿಯಂತ್ರಿಸಿದ ಭಾರತ ತಂಡ 7 ಎಸೆತಗಳು ಬಾಕಿ ಇರುವಂತೆಯೇ 4 ವಿಕೆಟ್ ಕಳೆದುಕೊಂಡು ಜಯಭೇರಿ ಬಾರಿಸಿತು.
ಸುಲಭ ಗುರಿ ಬೆಂಬತ್ತಿದ ಭಾರತ ತಂಡಕ್ಕೆ ಶೆಫಾಲಿ ಶರ್ಮ 35 ಎಸೆತಗಳಲ್ಲಿ 3 ಬೌಂಡರಿ ಸೇರಿದ 32 ರನ್ ಬಾರಿಸಿ ತಂಡವನ್ನು ಆಧರಿಸಿದರು. ಮಧ್ಯಮ ಕ್ರಮಾಂಕದಲ್ಲಿ ಕುಸಿತ ಅನುಭವಿಸಿದರೂ ಜೆಮಿಹಾ ರೋಡ್ರಿಗಜ್ (23) ಮತ್ತು ನಾಯಕಿ ಹರ್ಮನ್ ಪ್ರೀತ್ ಸಿಂಗ್ (ಗಾಯಗೊಂಡು ನಿವೃತ್ತಿ 29) ತಂಡವನ್ನು ಆಧರಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು.
ಇದಕ್ಕೂ ಮುನ್ನ ಬ್ಯಾಟ್ ಮಾಡಿದ ಪಾಕಿಸ್ತಾನ ತಂಡ ಅರುಂಧತಿ ರೆಡ್ಡಿ ಮಾರಕ ದಾಳಿಗೆ ತತ್ತರಿಸಿ ಸಾಧಾರಣ ಮೊತ್ತಕ್ಕೆ ಕುಸಿಯಿತು. ನಿದಿಯಾ ದರ್ (28), ಫಾತಿಮಾ ಸಾಹ (13), ಸೈಡಾ ಅರೂಬ್ ಶಾಹ್ (14), ಮುನೇಡಾ ಅಲಿ (17) ಎರಡಂಕಿಯ ಮೊತ್ತ ದಾಖಲಿಸಿ ತಂಡವನ್ನು 100ರ ಗಡಿ ದಾಟಿಸಿದರು. ಭಾರತದ ಪರ ಅರುಂಧತಿ 3 ವಿಕೆಟ್ ಕಿತ್ತರೆ, ಶ್ರೇಯಾಂಕಾ ಪಾಟೀಲ್ 2 ವಿಕೆಟ್ ಗಳಿಸಿದರು.