ಭಾರತವು ಅಭಿವೃದ್ಧಿಯತ್ತ ಮುನ್ನುಗುತ್ತಿದ್ದು, ಜಗತ್ತಿನ ಅಭಿವೃದ್ಧಿ ರಾಷ್ಟ್ರಗಳ ಜೊತೆ ಸ್ಪರ್ಧಿಸಲು ಸಿದ್ಧವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಮೇಲೆ ಲೋಕಸಭೆಗೆ ಬದಲು ರಾಜ್ಯಸಭೆಯಲ್ಲಿ ಭಾಷಣ ಮಾಡಿದ ಅವರು, ಕಾಂಗ್ರೆಸ್ ಆಡಳಿತದಲ್ಲಿ ಮಾಡಿದ ತಪ್ಪುಗಳನ್ನು ನಾವು ಸರಿಪಡಿಸುತ್ತಿದ್ದೇವೆ ಎಂದರು.
ಕೆಂಪುಕೋಟೆಯಲ್ಲಿ ಕಾಂಗ್ರೆಸ್ ಮಾಡಿದ ಭಾಷಣಗಳನ್ನು ಗಮನಿಸಿ. ಯಾವುದೇ ಅಭಿವೃದ್ಧಿ ಬಗ್ಗೆ ಮಾತನಾಡಿಲ್ಲ. ಕಾಂಗ್ರೆಸ್ ತಪ್ಪು ನೀತಿಗಳನ್ನು ತಿದ್ದುವುದರಲ್ಲಿ ನಮ್ಮ ಸಮಯ ಹೋಗುತ್ತಿದೆ ಎಂದು ಅವರು ಹೇಳಿದರು.
ಯಾವುದೇ ದೇಶಗಳು ಸುಮ್ಮನೆ ಒಪ್ಪಂದಕ್ಕೆ ಬರುವುದಿಲ್ಲ. ನಾವು ಅಭಿವೃದ್ಧಿಯತ್ತ ಮುನ್ನುಗ್ಗುತ್ತಿರುವುದರಿಂದ ನಮ್ಮ ಜೊತೆ ಅಮೆರಿಕ, ಯುರೋಪ್ ಮತ್ತು ರಷ್ಯಾದಂತಹ ರಾಷ್ಟ್ರಗಳು ಬರುತ್ತಿವೆ. ಭಾರತ ಸರಿಯಾದ ದಿಕ್ಕಿನಲ್ಲಿ ಅಭಿವೃದ್ಧಿಯತ್ತ ಸಾಗುತ್ತಿದೆ ಎಂದು ಅವರು ಸ್ಪಷ್ಟಪಡಿಸಿದರು.



