Sunday, June 14, 2026
Google search engine
Homeದೇಶಯೋಗಿ ಆದಿತ್ಯನಾಥ್ ವಿಮಾನ ಆಗ್ರಾದ ಬಳಿ ತುರ್ತು ಭೂಸ್ಪರ್ಶ!

ಯೋಗಿ ಆದಿತ್ಯನಾಥ್ ವಿಮಾನ ಆಗ್ರಾದ ಬಳಿ ತುರ್ತು ಭೂಸ್ಪರ್ಶ!

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪ್ರಯಾಣಿಸುತ್ತಿದ್ದ ವಿಮಾನದಲ್ಲಿ ತಾಂತ್ರಿಕ ದೋಷ ಕಂಡು ಬಂದ ಹಿನ್ನೆಲೆಯಲ್ಲಿ ದೆಹಲಿಯ ಆಗ್ರಾ ಸಮೀಪದ ತುರ್ತು ಭೂಸ್ಪರ್ಶ ಮಾಡಿದೆ.

ಆಗ್ರಾದಲ್ಲಿ ನಡೆಯಬೇಕಿದ್ದ ರ್ಯಾಲಿಯಲ್ಲಿ ಪಾಲ್ಗೊಂಡ ನಂತರ ಲಕ್ನೋಗೆ ಮರಳಬೇಕಿದ್ದ ಯೋಗಿ ಆದಿತ್ಯನಾಥ್ ಪ್ರಯಾಣಿಸುತ್ತಿದ್ದ ವಿಮಾನದಲ್ಲಿ ತಾಂತ್ರಿಕ ದೋಷ ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಆಗ್ರಾ ವಿಮಾನ ನಿಲ್ದಾಣಕ್ಕೆ ಮರಳಿ ತುರ್ತು ಭೂಸ್ಪರ್ಶ ಮಾಡಿದೆ.

ಯೋಗಿ ಆದಿತ್ಯನಾಥ್ ಸುರಕ್ಷಿತವಾಗಿದ್ದು, ಯಾವುದೇ ಅಪಾಯ ಸಂಭವಿಸಿಲ್ಲ. ರ್ಯಾಲಿಯಲ್ಲಿ ಪಾಲ್ಗೊಳ್ಳದೇ ಯೋಗಿ ಮತ್ತೊಂದು ವಿಮಾನದ ಮೂಲಕ ಲಕ್ನೋಗೆ ಮರಳಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿಮಾನ ಟೇಕಾಫ್ ಆದ ಕೆಲವೇ ನಿಮಿಷಗಳಲ್ಲಿ ಬ್ರೇಕ್ ನಲ್ಲಿ ದೋಷವನ್ನು ಪತ್ತೆ ಹಚ್ಚಿದ ಪೈಲೆಟ್ ಕೂಡಲೇ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ಈ ಹಿನ್ನೆಲೆಯಲ್ಲಿ ಆಗ್ರಾ ವಿಮಾನ ನಿಲ್ದಾಣಕ್ಕೆ ವಿಮಾನ ವಾಪಸ್ ಬಂದು ತುರ್ತು ಭೂಸ್ಪರ್ಶ ಮಾಡಿದೆ.

ಉತ್ತರ ಪ್ರದೇಶದಲ್ಲಿ ಸತತ 8 ವರ್ಷ ಅಧಿಕಾರದಲ್ಲಿ ಪೂರೈಸಿದ ಸಂಭ್ರಮಾಚರಣೆಯ ಎರಡು ದಿನಗಳ ನಂತರ ಈ ಘಟನೆ ನಡೆದಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments