ಆರ್ಥಿಕ ಸ್ವಾವಲಂಬನೆಗಾಗಿ ಪ್ರತ್ಯೇಕ ಆಡಳಿತಕ್ಕಾಗಿ ಒತ್ತಾಯಿಸುತ್ತಿರುವ ಈಸ್ಟರ್ನ್ ನಾಗಾಲ್ಯಾಂಡ್ ಪೀಪಲ್ಸ್ ಸಂಘಟನೆ ಚುನಾವಣೆ ಬಹಿಷ್ಕಾರಕ್ಕೆ ಕರೆ ನೀಡಿದ ಹಿನ್ನೆಲೆಯಲ್ಲಿ 6 ಜಿಲ್ಲೆಗಳಲ್ಲಿ ಶೂನ್ಯ ಮತದಾನ ದಾಖಲಾಗಿದೆ.
ಈಶಾನ್ಯ ರಾಜ್ಯಗಳಲ್ಲಿ ಚುನಾವಣೆಗೆ ಅಡ್ಡಿಯಾಗುತ್ತಿದೆ ಎಂದು ರಾಜ್ಯ ಚುನಾವಣಾಧಿಕಾರಿ ಕೇಂದ್ರ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆ. ಕೆಲವು ಸಂಘಟನೆಗಳು ಮತದಾನಕ್ಕೆ ಅಡ್ಡಿಪಡಿಸುತ್ತಿವೆ ಎಂದು ಆರೋಪಿಸಿದ್ದಾರೆ.
ನ್ಯಾಯಸಮ್ಮತ ಹಾಗೂ ಮುಕ್ತ ಚುನಾವಣೆಗೆ ಅಡ್ಡಿಪಡಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ. ಆದರೆ ಪ್ರತ್ಯೇಕತೆಗೆ ಬೇಡಿಕೆ ಇಟ್ಟಿರುವ ಸಂಘಟನೆ ಮತದಾನ ಮಾಡದಂತೆ ಕರೆ ನೀಡಿದೆ.