Sunday, June 14, 2026
Google search engine
Homeದೇಶಜಮ್ಮು ಕಾಶ್ಮೀರದಲ್ಲಿ ಕಂದಕಕ್ಕೆ ಸೇನಾ ವಾಹನ ಉರುಳಿ ಮೂವರು ಯೋಧರ ಸಾವು

ಜಮ್ಮು ಕಾಶ್ಮೀರದಲ್ಲಿ ಕಂದಕಕ್ಕೆ ಸೇನಾ ವಾಹನ ಉರುಳಿ ಮೂವರು ಯೋಧರ ಸಾವು

ಶ್ರೀನಗರ: ಸೇನಾ ವಾಹನ ಪ್ರಪಾತಕ್ಕೆ ಉರುಳಿ ಬಿದ್ದಿದ್ದರಿಂದ ಮೂವರು ಸೈನಿಕರು ಮೃತಪಟ್ಟ ಘಟನೆ ಜಮ್ಮು ಮತ್ತು ಕಾಶ್ಮೀರದ ರಾಂಬನ್‌ನಲ್ಲಿ ಸಂಭವಿಸಿದೆ.

ಯೋಧರಾದ ಅಮಿತ್ ಕುಮಾರ್, ಸುಜೀತ್ ಕುಮಾರ್ ಮತ್ತು ಮನ್ ಬಹದ್ದೂರ್ ಮೃತಪಟ್ಟಿದ್ದು, ಕಂದಕಕ್ಕೆ ವಾಹನ ಬಿದ್ದಿದ್ದರಿಂದ ಸಂಪೂರ್ಣ ನಜ್ಜುಗುಜ್ಜಾಗಿದೆ.

ಬೆಳಿಗ್ಗೆ 11.30 ರ ಸುಮಾರಿಗೆ ಬ್ಯಾಟರಿ ಚಶ್ಮಾ ಬಳಿ ಅಪಘಾತ ಸಂಭವಿಸಿದೆ. ಟ್ರಕ್ ಜಮ್ಮುವಿನಿಂದ ಶ್ರೀನಗರಕ್ಕೆ ತೆರಳುತ್ತಿದ್ದಾಗ ನಿಯಂತ್ರಣ ತಪ್ಪಿ 300ರಿಂದ 700 ಅಡಿ ಆಳದ ಕಂದಕಕ್ಕೆ ಉರುಳಿಬಿದ್ದಿದೆ ಎಂದು ತಿಳಿದು ಬಂದಿದೆ.

ಫೋಟೋದಲ್ಲಿ ವಾಹನದ ಅವಶೇಷಗಳು, ಸೈನಿಕರ ಶವಗಳು, ಸೈನಿಕರ ಬಳಿ ಇದ್ದ ಕಾಗದ ಪತ್ರಗಳು ಹರಡಿಕೊಂಡಿರುವುದನ್ನು ನೋಡಬಹುದಾಗಿದೆ.

ಸೈನಿಕರು, ಜಮ್ಮು ಮತ್ತು ಕಾಶ್ಮೀರ ಪೊಲೀಸರು, ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ಮತ್ತು ಸ್ಥಳೀಯ ಸ್ವಯಂಸೇವಕರು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments